ರಾಜ್ಯ

ಏಪ್ರಿಲ್ 20ರ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ನಿರ್ಧಾರ: ಶಿಕ್ಷಣ ಇಲಾಖೆ

ಕೊರೋನಾ ಸೋಂಕು ತಡೆಗಾಗಿ ರಾಷ್ಟ್ರಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಕುರಿತು ಏ.20ರ ಬಳಿಕ ನಿರ್ಧರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಏಪ್ರಿಲ್ 20ರ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ನಿರ್ಧಾರ: ಶಿಕ್ಷಣ ಇಲಾಖೆ
ವಿದ್ಯಾರ್ಥಿನಿಯರು
Published On :

ಬೆಂಗಳೂರು: ಕೊರೋನಾ ಸೋಂಕು ತಡೆಗಾಗಿ ರಾಷ್ಟ್ರಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಕುರಿತು ಏ.20ರ ಬಳಿಕ ನಿರ್ಧರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಗುರುವಾರ ಸುತ್ತೋಲೆ ಹೊರಡಿಸಿದ್ದು, 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಸಹ ಏ.20ರ ವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದೆ.

2020-21ನೇ ಸಾಲಿನ ದಾಖಲಾತಿ ಹಾಗೂ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ(ಆರ್ ಟಿ ಇ) ಮಕ್ಕಳ ದಾಖಲಾತಿ ಪ್ರಕ್ರಿಯೆಗಳನ್ನು ಸಹ ಏ.20ರ ವರೆಗೆ ಮುಂದೂಡಲಾಗಿದೆ, ಆ ಬಳಿಕವಷ್ಟೇ ಈ ಎಲ್ಲ ವಿಷಯಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ಧಿ ಹರಿದಾಡುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಗುರುವಾರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.