ರಾಜ್ಯ

ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಉಳಿಯಬೇಕು, ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು- ಮುಖ್ಯಮಂತ್ರಿ ಸೂಚನೆ

ಕೋವಿಡ್ -19 ಸೋಂಕು ಹರಡುವಿಕೆ ನಿಯಂತ್ರಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಎಲ್ಲಾ ಸಚಿವ ಸಂಪು ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಗಳಲ್ಲೇ ಉಳಿಯುವಂತೆ ಸೂಚಿಸಿದ್ದರೆ.

ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಉಳಿಯಬೇಕು, ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು- ಮುಖ್ಯಮಂತ್ರಿ ಸೂಚನೆ
ಬಿ.ಎಸ್.ಯಡಿಯೂರಪ್ಪ
Published On :

ಬೆಂಗಳೂರು: ಕೋವಿಡ್ -19 ಸೋಂಕು ಹರಡುವಿಕೆ ನಿಯಂತ್ರಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಎಲ್ಲಾ ಸಚಿವ ಸಂಪು ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಗಳಲ್ಲೇ ಉಳಿಯುವಂತೆ ಸೂಚಿಸಿದ್ದರೆ.

ಇಡೀ ದೇಶ ಲಾಕ್‍ಡೌನ್‍(ಸಂಪೂರ್ಣ ಸ್ತಬ್ಧ)ನಲ್ಲಿರುವಾಗ ತಮ್ಮನ್ನು ಭೇಟಿ ಮಾಡುವುದಕ್ಕಾಗಲಿ ಇಲ್ಲವೇ ಬೇರೆ ಇನ್ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು ಎಂದು ಯಡಿಯೂರಪ್ಪ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಮುಖ್ಯಮಂತ್ರಿವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಲು ಯಾವುದೇ ಸಾರ್ವಜನಿಕರಿಗೂ ಅವಕಾಶ ನೀಡಲಾಗಿಲ್ಲ. ಮುಖ್ಯಮಂತ್ರಿಯವರ ಕಚೇರಿಯ ಸೂಚನೆಗಳಂತೆ ಪಕ್ಷದ ಯಾವುದೇ ಮುಖಂಡರನ್ನೂ ಸಹ ಅವರ ನಿವಾಸದಲ್ಲಿ ಭೇಟಿಯಾಗಲು ಅವಕಾಶ ನೀಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.