ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು, ಚಿಂತಕರಿಂದ ಮುಖ್ಯಮಂತ್ರಿಗೆ ಪತ್ರ
ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು:ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಎಲ್ಲಾ ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ಕೂಡಲೇ ಅವರ ಬ್ಯಾಂಕ್ ಖಾತೆಗೆ ರೂ 5000 ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಾವು ಮಂಡಳಿಯ ನಿಧಿಯಿಂದ ಮಾಸಿಕ ರೂ. 1000 ನೆರವನ್ನು ಘೋಷಿಸಿರುವುದು ಸ್ವಾಗತಾರ್ಹ, ಆದರೆ ಅದನ್ನು ಕೂಡಲೇ ರೂ. 3000 ಕ್ಕೆ ಹೆಚ್ಚಿಸಲು ಕ್ರಮವಹಿಸಬೇಕು. ಇತರೆ ಅಸಂಘಟಿತ ಕಾರ್ಮಿಕರಿಗೂ ಇದೇ ರೀತಿಯ ಆರ್ಥಿಕ ನೆರವು ಸರಕಾರದ ಅನುದಾನದಲ್ಲಿ ಕೂಡಲೇ ಪ್ರಕಟಿಸಬೇಕು ಎಂದು ನಾಡಿನ ಹಿರಿಯ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಾಹಿತಿಗಳಾದ ಡಾ ಜಿ.ರಾಮಕೃಷ್ಣ (ಜಿ.ಆರ್), ಚಿದಂಬರ್ ರಾವ್ ಜಂಬೆ, ರಹಮತ್ ತರಿಕೆರೆ, ಕಾತ್ಯಾಯಿನಿ ಚಾಮರಾಜ್,ರೇಣುಕಾ ನಿಡುಗುಂದಿ, ಡಿ.ಎಸ್ ಚೌಗಲೆ ಸೇರಿ ಹಲವು ಪ್ರಗತಿಪರರರು, ಹಸಿದ ಹೊಟ್ಟೆಗೆ ಊಟ ಹಾಕುವಂತೆ ಮನವಿ ಮಾಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


