ರಾಜ್ಯ

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಿ: ಅಧಿಕಾರಿಗಳಿಗೆ ಶೆಟ್ಟರ್ ಸೂಚನೆ

ಅಗತ್ಯ ವಸ್ತುಗಳ ಖರೀದಿ ವೇಳೆ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸೂಚಿಸಿದ್ದಾರೆ.

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಿ: ಅಧಿಕಾರಿಗಳಿಗೆ ಶೆಟ್ಟರ್ ಸೂಚನೆ
ಜಗದೀಶ್ ಶೆಟ್ಟರ್
Published On :

ಬೆಳಗಾವಿ: ಅಗತ್ಯ ವಸ್ತುಗಳ ಖರೀದಿ ವೇಳೆ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸೂಚಿಸಿದ್ದಾರೆ. 

ಜಿಲ್ಲಾ ಕಚೇರಿಯಲ್ಲಿ ಶಾಸಕರೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು, ಜನರಿಗೆ ಅಗತ್ಯ ವಸ್ತುಗಳನ್ನು ಮನೆಗಳ ಬಾಗಿಲಿಗೆ ತಲುಪಿಸಿದ್ದೇ ಆದರೆ, ಇಂತಹ ಗುಂಪು ಸೇರುವ ಸಂದರ್ಭಗಳನ್ನು ತಪ್ಪಿಸಬಹುದು. 

ಜಿಲ್ಲೆಗಳಲ್ಲಿಯೇ ವೈರಸ್ ಕುರಿತು ಪರೀಕ್ಷೆ ನಡೆಸಲು ಪ್ರಯೋಗಾಲಯಗಳನ್ನು ಸ್ಥಾಪನೆ ಮಾಡುವ ವಿಚಾರ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದೆ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಜನರಿಗೆ ಅಗತ್ಯ ವಸ್ತುಗಳು ಸೂಕ್ತ ರೀತಿಯಲ್ಲಿ ತಲುಪುವಂತೆ ನೋಡಿಕೊಳ್ಳಿ. ಯಾವುದೇ ಅಗತ್ಯ ವಸ್ತುಗಳ ಅಗತ್ಯತೆ ಕಂಡು ಬಂದಿದ್ದೇ ಆದರಲ್ಲಿ ಆ ಕುರಿತು ಸ್ಥಳೀಯ ಅಧಿಕಾರಿಗಳು ಸರ್ಕಾರದ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.