ಕೊರೋನಾ ವಿರುದ್ಧ ಸಮರ: 50 ಲಕ್ಷ ದೇಣಿಗೆ ನೀಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್
ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ತಾವು ಕೊರೋನಾ ವಿರುದ್ಧ ಹೋರಾಟಕ್ಕೆ ಕೈಜೋಡಿಸಿದ್ದು 50 ಲಕ್ಷ ರೂ ದೇಣಿಗೆ ನೀಡಿದ್ದಾರೆ ಮಾತ್ರವಲ್ಲದೆ ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ಎರಡು ತಿಂಗಳ ವೇತನವನ್ನು 2,00,000 ರೂ. ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ತಿಂಗಳ ವೇತನವನ್ನು 2,00,000 ರೂ ನೀಡಿದ್ದಾರೆ.

ಬೆಂಗಳೂರು: ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ತಾವು ಕೊರೋನಾ ವಿರುದ್ಧ ಹೋರಾಟಕ್ಕೆ ಕೈಜೋಡಿಸಿದ್ದು 50 ಲಕ್ಷ ರೂ ದೇಣಿಗೆ ನೀಡಿದ್ದಾರೆ ಮಾತ್ರವಲ್ಲದೆ ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ಎರಡು ತಿಂಗಳ ವೇತನವನ್ನು 2,00,000 ರೂ. ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ತಿಂಗಳ ವೇತನವನ್ನು 2,00,000 ರೂ ನೀಡಿದ್ದಾರೆ.
ಸುಮಲತಾ ಈ ಸಂಬಂಧ ಟ್ವೀಟ್ ಮಾಡಿಕೊಂಡಿದ್ದು "ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆ.ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50, 00, 000 ಲಕ್ಷ ರೂ. ಗಳನ್ನು ನೀಡಿದ್ದೇನೆ" ಎಂದಿದ್ದಾರೆ.
ಇದಲ್ಲದೆ ಮಂಡ್ಯ ಸಂಸದರು ತಾವೊಬ್ಬ ಭಾರತೀಯ ನಾಗರಿಕಳಾಗಿ : ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕ್ರಮವಾಗಿ ತಮ್ಮ ಎರಡು ತಿಂಗಳ ವೇತನ 2,00,000 ರೂ. ನೀಡಿದ್ದಾಗಿ ಹೇಳಿದ್ದಾರೆ.
ದೇಶಾದ್ಯಂತ ವ್ಯಾಪಿಸುತ್ತಿರುವ ಕೊರೋನಾವೈರಸ್ ಹಾವಳಿ ತಡೆಗೆ ನಿನ್ನೆ (ಗುರುವಾರ ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು.
@narendramodi @PMOIndia @BSYBJP @CMofKarnataka @drashwathcn @sriramulubjp ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2, 00, 000 ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2, 00, 000 ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್ -19ಕ್ಕೆ ನೀಡಿದ್ದೇನೆ.
https://t.co/WgJfQQ0FFA
— Sumalatha Ambareesh
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


