ಕೋವಿಡ್-19: ಮಾಧ್ಯಮದವರಿಗೂ ವಿಶೇಷ ಆರ್ಥಿಕ ನಿಧಿ ಒದಗಿಸಲು ಮುಖ್ಯಮಂತ್ರಿಗೆ ಮನವಿ
ಕೋವಿಡ್-19 ಸಂದರ್ಭದಲ್ಲಿ ಮಾಧ್ಯಮದವರಿಗೆ ವಿಶೇಷ ಆರ್ಥಿಕ ನಿಧಿ ಒದಗಿಸಬೇಕು ಎಂದು ಬೆಂಗಳೂರು ಪ್ರೆಸ್‌ಕ್ಲಬ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.

ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಮಾಧ್ಯಮದವರಿಗೆ ವಿಶೇಷ ಆರ್ಥಿಕ ನಿಧಿ ಒದಗಿಸಬೇಕು ಎಂದು ಬೆಂಗಳೂರು ಪ್ರೆಸ್‌ಕ್ಲಬ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪತ್ರ ಬರೆದಿರುವ ಪ್ರೆಸ್‌ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಕೊರೊನಾ ಸೋಂಕಿನಿಂದ ನಾಡಿನ ಜನರ ಜೀವ ಕಾಪಾಡಬೇಕೆಂದು ಹಗಳಲಿರುಳು ಶ್ರಮಿಸುತ್ತಿರುವ ತಮ್ಮ ಜನಪರ ಕಾಳಜಿ ಪ್ರಶಂಸನೀಯ. ಕೊರೊನಾ ಸೋಂಕು ಹರಡದಂತೆ ಸಮರೋಪಾದಿಯಲ್ಲಿ ಜನತೆಯ ನೋವು ನಲಿವಿಗೆ ಸ್ಪಂದಿಸುತ್ತಿರುವ ಮತ್ತು ಜನಜೀವನ ನಡೆಸಲು ಪರಿಹಾರಕ್ಕೆ ರೂಪಿಸುತ್ತಿರುವ ಕಾರ್ಯಕ್ರಮಗಳು ತಮ್ಮ ಕರ್ತವ್ಯ ನಿಷ್ಠೆಗೆ ಧ್ಯೋತಕವಾಗಿದೆ.
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾಧ್ಯಮವನ್ನು ಅಗತ್ಯ ಸೇವೆ ಎಂದು ಪರಿಣಸಿರುವುದ್ದು, ಅದಕ್ಕೆ ತಾವು ಸಹಮತ ವ್ಯಕ್ತಪಡಿಸಿದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


