ಕಲಬುರಗಿ: ಲಾಕ್‌ಡೌನ್ ನಿಂದ ಹಣ್ಣು ಮಾರಾಟ ಮಾಡಲಾಗದೆ ರೈತ ಆತ್ಮಹತ್ಯೆ
ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು ಸರಬರಾಜು ಮಾಡಲಾಗದೆ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಕಲಬುರಗಿ: ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು ಸರಬರಾಜು ಮಾಡಲಾಗದೇ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಜಿಲ್ಲೆ ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ಕಲ್ಲಂಗಡಿ ಹಣ್ಣು ಸರಬರಾಜು ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
45 ವರ್ಷದ ಚಂದ್ರಕಾಂತ ಬಿರಾದಾರ ಎಂಬುವವರು ಸೋಮವಾರ ರಾತ್ರಿ ತಮ್ಮ ಜಮೀನಿನಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಮೃತ ಚಂದ್ರಕಾಂತ ಅವರು ತಮ್ಮ 3 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದರು. ಆದರೆ, ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಬೆಳೆದ ಹಣ್ಣುಗಳನ್ನು ಸಾಗಾಟ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


