ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆ ಪ್ರಾರಂಭ: ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ- ಸಿಎಂ ಬಿಎಸ್‌ವೈ ಅಭಯ
ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದು, ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದು, ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಹೇಳಿಕೆ ಪ್ರಕಟಿಸಿರುವ ಅವರು, ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ.
ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಆದ್ದರಿಂದ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


