ರೆಡ್ ಝೋನ್ ಪಟ್ಟಿಗೆ ಮಂಡ್ಯ: ಶವ ಸಂಸ್ಕಾರದಿಂದಾಗಿ ಪಾಂಡವಪುರಕ್ಕೂ ವಕ್ಕರಿಸಿದ ಕೊರೋನಾ
ಮಹಾರಾಷ್ಟ್ರದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಮಂಡ್ಯ ಜಿಲ್ಲೆಗೆ ತಂದು ಅಂತ್ಯಸಂಸ್ಕಾರ ನಡೆಸಲು ಅವಕಾಶ ಕಲ್ಪಿಸುವ ಮೂಲಕ ಅಧಿಕಾರಿಗಳೇ ಮಂಡ್ಯ ಜಿಲ್ಲೆಯನ್ನು ಕೊರೋನಾ ಗ್ರೀನ್ ಜೋನ್‌ನಿಂದ ರೆಡ್‌ಝೋನ್ ಪಟ್ಟಿಗೆ ಸೇರಿಸಿರುವ ಆತಂಕಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಮಂಡ್ಯ ಜಿಲ್ಲೆಗೆ ತಂದು ಅಂತ್ಯಸಂಸ್ಕಾರ ನಡೆಸಲು ಅವಕಾಶ ಕಲ್ಪಿಸುವ ಮೂಲಕ ಅಧಿಕಾರಿಗಳೇ ಮಂಡ್ಯ ಜಿಲ್ಲೆಯನ್ನು ಕೊರೋನಾ ಗ್ರೀನ್ ಜೋನ್‌ನಿಂದ ರೆಡ್‌ಝೋನ್ ಪಟ್ಟಿಗೆ ಸೇರಿಸಿರುವ ಆತಂಕಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ
ಇದರ ಪರಿಣಾಮವಾಗಿ, ಪಾಂಡವಪುರ ತಾಲೂಕಿನ ಮೇಲುಕೋಟೆಯ ಕೊಡಗಹಳ್ಳಿಯಲ್ಲಿ ಒಂದೇ ಗ್ರಾಮದ ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ
ಮೇಲುಕೋಟೆಯಿಂದ 3 ಕಿ.ಮೀ. ದೂರದಲ್ಲಿರುವ ಕೊಡಗಹಳ್ಳಿಗೆ ಮುಂಬೈಯಿಂದ 10 ದಿನಗಳ ಹಿಂದೆ ಶವವೊಂದನ್ನು ತಂದು ಅಂತ್ಯಕ್ರಿಯೆ ಮಾಡಲಾಗಿತ್ತು. ವ್ಯಕ್ತಿಯೊಬ್ಬರು ಮುಂಬೈಯಲ್ಲಿ ಮೃತಪಟ್ಟಿದ್ದು, ಅವರ ಶವವನ್ನು ಲಾಕ್ ಡೌನ್ ನಡುವೆಯೂ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನಡೆಸಿರುವುದೇ ಈ ಎಲ್ಲಾ ಅವಾಂತರಗಳಿಗೆ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


