ರಾಜ್ಯ

ಜಗತ್ತಿನ ವಿಶ್ವಾಸ ಕಳೆದುಕೊಂಡ ಚೀನಾ: ಕೊರೋನಾ ನಿಯಂತ್ರಣದಲ್ಲಿ ಮೆಚ್ಚುಗೆ ಪಡೆದ ಭಾರತ: ಸಂತೋಷ್

ಬೆಂಗಳೂರು: ಚೀನಾ ದೇಶ ಪ್ರಪಂಚದಾದ್ಯಂತ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಹೀಗಾಗಿ ಅನೇಕ ದೊಡ್ಡ ಹೂಡಿಕೆ ಸಂಸ್ಥೆಗಳು ಆ ದೇಶದಿಂದ ಹೊರಬರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.

ಜಗತ್ತಿನ ವಿಶ್ವಾಸ ಕಳೆದುಕೊಂಡ ಚೀನಾ: ಕೊರೋನಾ ನಿಯಂತ್ರಣದಲ್ಲಿ ಮೆಚ್ಚುಗೆ ಪಡೆದ ಭಾರತ: ಸಂತೋಷ್
ಬಿ,ಎಲ್ ಸಂತೋಷ್
Published On :

ಬೆಂಗಳೂರು: ಬೆಂಗಳೂರು: ಚೀನಾ ದೇಶ ಪ್ರಪಂಚದಾದ್ಯಂತ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಹೀಗಾಗಿ ಅನೇಕ ದೊಡ್ಡ ಹೂಡಿಕೆ ಸಂಸ್ಥೆಗಳು ಆ ದೇಶದಿಂದ ಹೊರಬರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಬಿ.ಎಲ್.ಸಂತೋಷ್  ಹೇಳಿದ್ದಾರೆ. 

ಪ್ರಜ್ಞಾ ಪ್ರವಾಹ ಸಂಘಟನೆ ಆಯೋಜಿಸಿದ್ದ ವಿಡಿಯೋ ಕಾನ್ಪ್ ರೆನ್ಸ್ ನಲ್ಲಿ ಮಾತನಾಡಿದ ಅವರು, ಚೀನಾದಿಂದ ಹೊರಬರುವ ಹೂಡಿಕೆದಾರರಿಗೆ ಭಾರತ ಸದ್ಯ  ದಾರಿದೀಪವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳು ಚೀನಾವನ್ನು ತೊರೆದು ಭಾರತದಲ್ಲಿ ಹೂಡಿಕೆ ಮಾಡಲು ಪ್ರಯತ್ನಿಸಿದರೆ ನಾವು ಆಶ್ಚರ್ಯಪಡಬೇಕಾಗಿಲ್ಲ, ಮುಂಬರುವ ತಿಂಗಳುಗಳಲ್ಲಿ ಭಾರತೀಯ ಕೈಗಾರಿಕೆಗಳು ಅಭಿವೃದ್ಧಿ ಹೊಂದಲು ಇಲ್ಲಿ ಅಪಾರ ಸಾಮರ್ಥ್ಯವಿದೆ, ಚೀನಾದಿಂದ ಹೊರಹೋಗುವ ಕೈಗಾರಿಕೆಗಳನ್ನು ಆಕರ್ಷಿಸಲು ಭಾರತ ಸರ್ಕಾರ ಎಲ್ಲಾ ಕ್ರಮಗಳನ್ನು
ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
    
ಕೊರೋನಾ ನಿಯಂತ್ರಿಸಲು ಭಾರತ ಸರ್ಕಾರ ಕೈಗೊಂಡ ಎಲ್ಲಾ ಕ್ರಮಗಳ ಬಗ್ಗೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತ ಪಡಿಸಿದೆ. ಲಾಕ್ ಡೌನ್ ನಿಯಮ ಕೊರೋನಾ ತೀವ್ರ ಮಟ್ಟದಲ್ಲಿ ಹರಡುವುದನ್ನು  ನಿಯಂತ್ರಿಸಿದೆ ಎಂದು ಹೇಳಿದ್ದಾರೆ,

ಆರ್ಥಿಕವಾಗಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪ್ರಬಲ ಮತ್ತು ಮುಂಚೂಣಿಯಲ್ಲಿದ್ದ ಪಾಶ್ಚಿಮಾತ್ಯ ದೇಶಗಳಲ್ಲಿ ಸೋಂಕಿತರ ಸಂಖ್ಯೆ ಲಕ್ಷ ಮುಚ್ಚುತ್ತಿರುವಾಗ ಭಾರತದಲ್ಲಿ ಕೇವಲ 1ಸಾವಿರ ಸೋಂಕಿತರಿದ್ದರು. 45 ದಿನಗಳ ಲಾಕ್ ಡೌನ್ ಭಾರತದಲ್ಲಿ ಸೋಂಕಿತ ಸಂಖ್ಯೆ ಕಡಿಮೆಯಾಗುವಂತೆ ಮಾಡಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.