ರಾಜ್ಯ

ಮದ್ಯ ಪ್ರೀಯರಿಗೆ ಗುಡ್ ನ್ಯೂಸ್: ಸೋಮವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ, ಷರತ್ತು ಅನ್ವಯ!

ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಕಳೆದ 39 ದಿನಗಳಿಂದ ಜಾರಿಯಲ್ಲಿರುವ ಲಾಕ್‌ಡೌನ್‌ ಮಾರ್ಗಸೂಚಿಗಳು ನಾಳೆ ಮಧ್ಯರಾತ್ರಿ (ಮೇ 3)ಗೆ ಕೊನೆಯಾಗಲಿವೆ.

ಮದ್ಯ ಪ್ರೀಯರಿಗೆ ಗುಡ್ ನ್ಯೂಸ್: ಸೋಮವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ, ಷರತ್ತು ಅನ್ವಯ!
ಮದ್ಯದಂಗಡಿ
Published On :

ಬೆಂಗಳೂರು: ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಕಳೆದ 39 ದಿನಗಳಿಂದ ಜಾರಿಯಲ್ಲಿರುವ ಲಾಕ್‌ಡೌನ್‌ ಮಾರ್ಗಸೂಚಿಗಳು ನಾಳೆ ಮಧ್ಯರಾತ್ರಿ (ಮೇ 3)ಗೆ ಕೊನೆಯಾಗಲಿವೆ.
 
ಕೆಂದ್ರ ಸರ್ಕಾರದ ಸೂಚನೆಯಂತೆ ರಾಜ್ಯವನ್ನು ಮೂರು ವಲಯಗಳನ್ನಾಗಿ ವಿಂಗಡನೆ ಮಾಡಲಾಗಿದೆ. ಕೇಂದ್ರದ ಮಾರ್ಗಸೂಚಿಯನ್ವಯ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿ ಅನ್ವಯ ಕರ್ನಾಟಕ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ ಕೊಡಲಾಗಿದೆ.

ರಾಜ್ಯವನ್ನು ರೆಡ್​, ಗ್ರೀನ್​​, ಆರೆಂಜ್ ಎಂದು ಮೂರು ಝೋನ್​ಗಳನ್ನಾಗಿಸಿ ವಿಂಗಡಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಂಪೂರ್ಣ ಮಾರ್ಗಸೂಚಿಯನ್ನು ಪಾಲನೆಯನ್ನು ರಾಜ್ಯ ಸರ್ಕಾರ ಪಾಲನೆ ಮಾಡಿದ್ದು, ರೆಡ್​ ಝೋನ್​​ನಲ್ಲಿ ಕರ್ನಾಟಕದ ಆರು ಜಿಲ್ಲೆಗಳಿವೆ. ಬೆಂಗಳೂರು ನಗರ, ಮೈಸೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ವಿಜಯಪುರ ರೆಡ್​ಝೋನ್‌ಲ್ಲಿರುವ ಜಿಲ್ಲೆಗಳು. ರೆಡ್ ಝೋನ್​​ಗಳಲ್ಲಿ ಯಾವುದೇ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ ಎಲ್ಲಾ ಮೂರು ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. 

ಈ ಕುರಿತು ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದು, ಮೇ 4 ರಿಂದ ಸಿಎಲ್-೨ ಮತ್ತು ಎಂಎಸ್‌ಐಎಲ್ ಮದ್ಯದ ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮದ್ಯದ ಮಳಿಗೆಗಳಲ್ಲಿ ಐದು ಜನ ಗ್ರಾಹಕರು ಮಾತ್ರ ಇರಬೇಕು. ಮದ್ಯ ಖರೀದಿ ಮಾಡವಾಗ 6 ಅಡಿ ಕಡಿಮೆ ಇಲ್ಲದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಆದೇಶದಲ್ಲಿ ತಿಳಿಸಲಾಗಿದೆ.

ಮದ್ಯದಂಗಡಿಗಳು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮಾತ್ರ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿದ್ದು, ಮದ್ಯ ಖರೀದಿಸಲು ಬರುವ ಗ್ರಾಹಕರು ಮತ್ತು ಮದ್ಯ ಮಾರಾಟಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮದ್ಯದಂಗಡಿಗಳಲ್ಲಿ ಚಾಚೂ ತಪ್ಪದೆ ಸ್ಯಾನಿಟೈಸರ್ ಬಳಕೆಯನ್ನು ಮಾಡಬೇಕಾಗಿದೆ. 

ಸಿಎಲ್-2 ಮತ್ತು ಎಂ.ಎಸ್.ಐ.ಎಲ್ ಮದ್ಯದ ಮಳಿಗೆಗಳು ಹೊರತುಪಡಿಸಿ ಮಾಲ್ ಗಳು ಮತ್ತು ಸೂಪರ್ ಮಾರ್ಕೆಟ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಅಬಕಾರಿ ಕಾಯ್ದೆ ಆದೇಶ ಮತ್ತು ಅನ್ವಯಿಸುವ ತತ್ಸಂಬಂಧಿತ ನಿಯಗಳನ್ನು ಮದ್ಯದ ಮಳಿಗೆಗಳು ಪಾಲಿಸಬೇಕು. ಸರ್ಕಾರದ ಆದೇಶ ಪಾಲನೆಯಾಗುತ್ತಿದೆಯೇ ಎನ್ನುವುದನ್ನು ಅಬಕಾರಿ ಉಪ ಆಯುಕ್ತರು ಪರಿಶೀಲನೆ ಮಾಡಬೇಕು. ಹಾಗೊಂದು ವೇಳೆ ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.