ರಾಜ್ಯ

ಮಧುಗಿರಿ: ಮೊಲ‌ ಬೇಟೆಯಾಡಿ ಟಿಕ್ ಟಾಕ್ ಮಾಡಿದವರ ಬಂಧನ

ಕಾಡು ಮೊಲವನ್ನು ಬೇಟೆಯಾಡಿ ಟಿಕ್‌ಟಾಕ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಧುಗಿರಿ: ಮೊಲ‌ ಬೇಟೆಯಾಡಿ ಟಿಕ್ ಟಾಕ್ ಮಾಡಿದವರ ಬಂಧನ
ಮೊಲ ಬೇಟೆಗಾರರ ಬಂಧನ
Published On :

ತುಮಕೂರು: ಕಾಡು ಮೊಲವನ್ನು ಬೇಟೆಯಾಡಿ ಟಿಕ್‌ಟಾಕ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಧುಗಿರಿ ತಾಲೂಕಿನ ಕರಿದುಗ್ಗನಹಳ್ಳಿ ಗ್ರಾಮದ ವಿನಯ್, ವಿನಯ್ ಕುಮಾರ್ ಬಂಧಿತ ಆರೋಪಿಗಳು.

ಬಂಧಿತರು ಮೊಲ ಬೇಟೆಯಾಡಿ ನಂತರ ಮಾಂಸ ಕತ್ತರಿಸುವುದನ್ನು ಟಿಕ್ ಟಾಕ್ ಮಾಡಿ ಹರಿಬಿಟ್ಟಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರಿ ವೈರಲ್ ಆಗಿದ ಹಿನ್ನೆಲೆಯಲ್ಲಿ ತುಮಕೂರು ಉಪ ಅರಣ್ಯ ಸಂರಕ್ಷಾಣಾಧಿಕಾರಿ ಹೆಚ್.ಸಿ.ಗಿರೀಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 2(16), 9, 39, 50, 51 ಅಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.