ಸಾಹಿತಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು ಎಂದು ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ
ನಿಸಾರ್ ಅಹ್ಮದ್ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಯಾವ ಪಂಥ, ಪಂಗಡಕ್ಕೆ ಕಟ್ಟಿಕೊಳ್ಳದೆ ಸ್ವಚ್ಛಂದವಾಗಿ ಹಕ್ಕಿಯಂತೆ ಕಾವ್ಯ ಕಟ್ಟುತ್ತಾ ಸರ್ವಜನ ಪ್ರಿಯರಾಗಿದ್ದ ನಿಸಾರ್ ಅಹ್ಮದ್ ಅವರ ಕಾಯ ಅಳಿದರೂ ಅವರ ಕಾವ್ಯದ ಮೂಲಕ ನೆಮ್ಮ ನೆನಪಲ್ಲಿ ಸದಾ ಜೀವಂತವಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂವೇದನಾಶೀಲ ಹಾಗೂ ಜನಪ್ರಿಯ ಕವಿ ನಿಸಾರ್ ಅಹ್ಮದ್ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಕನ್ನಡದ ಪ್ರಖ್ಯಾತ ಕವಿ ನಿಸಾರ್ ಅಹಮದ್ ಅವರ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ ಎನ್ ನಂದೀಶ್ ಹಂಚೆ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


