ಕಾರ್ಮಿಕರ ಕಳುಹಿಸುವ ಕುರಿತು ಒಡಿಶಾ ಸಿಎಂ ಜೊತೆ ಯಡಿಯೂರಪ್ಪ ಸಭೆ
ರಾಜ್ಯದಲ್ಲಿ ನೆಲೆಸಿರುವ ಒಡಿಶಾ ಕಾರ್ಮಿಕರನ್ನು ವಾಪಸ್ ಅವರ ರಾಜ್ಯಕ್ಕೆ ಕಳುಹಿಸುವ ಸಂಬಂಧ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಲಾಕ್'ಡೌನ್ ಸಂದರ್ಭದಲ್ಲಿ ಅವರಿಗೆ ಅಗತ್ಯವಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನೆಲೆಸಿರುವ ಒಡಿಶಾ ಕಾರ್ಮಿಕರನ್ನು ವಾಪಸ್ ಅವರ ರಾಜ್ಯಕ್ಕೆ ಕಳುಹಿಸುವ ಸಂಬಂಧ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಲಾಕ್'ಡೌನ್ ಸಂದರ್ಭದಲ್ಲಿ ಅವರಿಗೆ ಅಗತ್ಯವಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ತಿಳಿಸಿದ್ದಾರೆ.
ಶನಿವಾರ ಒಡಿಶಾ ಕಾರ್ಮಿಕರನ್ನು ಸ್ವಂತ ರಾಜ್ಯಕ್ಕೆ ವಾಪಸ್ ಕಳುಹಿಸುವ ಕುರಿತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮಖ್ಯಮಂತ್ರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಈ ಬರವಸೆ ನೀಡಿ, ನೋಡಲ್ ಅಧಿಕಾರಿಗಳು ಒಡಿಶಾ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆಂದು ಹೇಳಿದ್ದಾರೆ.
ಕೇಂದ್ರ ಮಾರ್ಗಸೂಚಿ ಅನ್ವಯ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ಪುರನಾರಂಭಿಸಲಾಗುತ್ತದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಈ ವೇಳೆ ಒಡಿಶಾ ರಾಜ್ಯಕ್ಕೆ ಹಿಂದಿರುಗುವ ಕಾರ್ಮಿಕರ ವಿವರ, ಅವರ ಆರೋಗ್ಯ ತಪಾಸಣೆ ಹಾಗೂ ಅವರ ಕ್ವಾರಂಟೈನ್ ವ್ಯವಸ್ಥೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


