ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿನೂ ಇಲ್ಲ:ಡಿ ಕೆ ಶಿವಕುಮಾರ್
ವಲಸೆ ಕೂಲಿ ಕಾರ್ಮಿಕರ ಕಷ್ಟ ಸುಖಗಳನ್ನು ಸರ್ಕಾರದ ಒಬ್ಬ ಸಚಿವಾರಗಲಿ, ಪ್ರತಿನಿಧಿಗಳಾಗಲಿ ಬಂದು ಆಲಿಸಿಲ್ಲ. ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು: ವಲಸೆ ಕೂಲಿ ಕಾರ್ಮಿಕರ ಕಷ್ಟ ಸುಖಗಳನ್ನು ಸರ್ಕಾರದ ಒಬ್ಬ ಸಚಿವಾರಗಲಿ, ಪ್ರತಿನಿಧಿಗಳಾಗಲಿ ಬಂದು ಆಲಿಸಿಲ್ಲ. ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಾಯಕರ ತಂಡ ಇಂದು ನಗರದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತಮ್ಮೂರುಗಳಿಗೆ ಪ್ರಯಾಣಿಸಲು ಸಿದ್ದರಾಗಿ ಬಂದಿದ್ದ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಲು ಬಂದರು. ಬಸ್ಸಿನೊಳಗೆ ಕುಳಿತಿದ್ದ ಕಾರ್ಮಿಕರ ಬಳಿಗೆ ಹೋಗಿ ಅವರ ಸಮಸ್ಯೆಗಳನ್ನು ಖುದ್ದು ವಿಚಾರಿಸಿದರು. ವಿವಿಧ ಊರುಗಳಿಗೆ ತೆರಳಲು ಬಂದಿದ್ದ ಮಹಿಳೆಯರು, ಮಕ್ಕಳನ್ನು ಮಾತನಾಡಿಸಿದರು.
ಸರ್ಕಾರ ಕೂಲಿ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಲು ಇನ್ನೂ ವ್ಯವಸ್ಥೆಗಳನ್ನು ಸರಿಯಾಗಿ ಮಾಡಿಲ್ಲ. ಜನರು ಇಲ್ಲಿಗೆ ಬಂದು ಇನ್ನೂ ಆತಂಕದಲ್ಲಿದ್ದಾರೆ. ನಾವಿಲ್ಲಿ ರಾಜಕಾರಣ ಮಾಡಲು ಬಂದಿಲ್ಲ. ಸರ್ಕಾರದ ಒಬ್ಬ ಸಚಿವರುಗಳೂ ಬಾರದ ಕಾರಣ ಜನರ ಕಷ್ಟ ಆಲಿಸಲು ಬಂದಿದ್ದೇವೆ. ಇಲ್ಲಿ ಏನು ನಡೆಯುತ್ತಿದೆ ಎಂದು ಮಾಧ್ಯಮಗಳಿಂದಷ್ಟೇ ಗೊತ್ತಾಗುತ್ತಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬಡ ಕೂಲಿ ಕಾರ್ಮಿಕರನ್ನು ಸರ್ಕಾರ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿ ಅವರ ಊರುಗಳಿಗೆ ಸುರಕ್ಷಿತವಾಗಿ ಕಳುಹಿಸಿಕೊಡಲಿ. ಬೇರೆ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ಅನುಸರಿಸುತ್ತಿರುವ ಕ್ರಮಗಳನ್ನು ನಮ್ಮಲ್ಲಿಯೂ ಅನುಸರಿಸಲಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


