ರಾಮನಗರ: ಕುಡಿದ ಮತ್ತಿನಲ್ಲಿ ಮಾಗಡಿ ಶಾಸಕ ಮಂಜುನಾಥ್ ಗೆ ಗ್ರಾಮಸ್ಥನ ಆವಾಜ್!
ರಾಜ್ಯಾದ್ಯಂತ ಎಣ್ಣೆ ಅಂಗಡಿ ಓಪನ್ ಆಗುತ್ತಿದ್ದಂತೆ ಕುಡುಕರ ಗಲಾಟೆ, ಗದ್ದಲ, ಜೋರಾಗಿ ಸದ್ದು ಮಾಡುತ್ತಿದೆ. ಕುಡಿದ ಮತ್ತಿನಲ್ಲಿ ಗ್ರಾಮಸ್ಥರೊಬ್ಬರು ಆವಾಜ್ ಹಾಕಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಇಂದು ನಡೆದಿದೆ.

ರಾಮನಗರ: ರಾಜ್ಯಾದ್ಯಂತ ಎಣ್ಣೆ ಅಂಗಡಿ ಓಪನ್ ಆಗುತ್ತಿದ್ದಂತೆ ಕುಡುಕರ ಗಲಾಟೆ, ಗದ್ದಲ, ಜೋರಾಗಿ ಸದ್ದು ಮಾಡುತ್ತಿದೆ. ಕುಡಿದ ಮತ್ತಿನಲ್ಲಿ ಗ್ರಾಮಸ್ಥರೊಬ್ಬರು ಆವಾಜ್ ಹಾಕಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಇಂದು ನಡೆದಿದೆ.
ಮಾಗಡಿ ತಾಲೂಕಿನ ಬಸವನಪಾಳ್ಯದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಶಾಸಕರು ಆಗಮಿಸಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶಾಸಕರು ಹಾಗೂ ಗ್ರಾಮಸ್ಥನ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಎರಡು ಬಣದ ನಡುವೆ ಸ್ವಲ್ಪ ಮಟ್ಟಿನ ವಾಗ್ವಾದ ನಡೆದಿದೆ. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಹಾಲಿನ ಡೇರಿ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡಿದ್ದಕ್ಕೆ ಕುಡಿದು ತಮ್ಮ ಮೇಲೆ ಆವಾಜ್ ಹಾಕಿರುವ ಗ್ರಾಮಸ್ಥನ ವಿರುದ್ಧ ದೂರು ನೀಡಿರುವುದಾಗಿ ಶಾಸಕ ಮಂಜುನಾಥ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


