ಬೆಂಗಳೂರು: ಪರಾರಿಗೆ ಯತ್ನಸಿದ ಕೊಲೆ ಆರೋಪಿ ಕಾಲಿಗೆ ಗುಂಡೇಟು
ರೌಡಿಶೀಟರ್ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಸೋಮವಾರ ಬೆಳ್ಳಂಬೆಳಗ್ಗೆಯೇ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ನಡೆದಿದೆ.

ಬೆಂಗಳೂರು: ರೌಡಿಶೀಟರ್ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಸೋಮವಾರ ಬೆಳ್ಳಂಬೆಳಗ್ಗೆಯೇ ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ನಡೆದಿದೆ.
ಕಳೆದ ಎರಡು ದಿನಗಳ ಹಿಂದಷ್ಟೇ ರೌಡಿಶೀಟರ್ ಬಿಜು ಅಲಿಯಾಸ್ ಬಾಗಲೂರು ಲೇಔಟ್‌ನ ಬುಜ್ಜಿ (30) ಹತ್ಯೆ ಪ್ರಕರಣದ ಆರೋಪಿ ಸಂಜಯ್ ಅಲಿಯಾಸ್ ಆ್ಯಂಡ್ರೂಸ್ನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
ಈ ಸಂದರ್ಭದಲ್ಲಿ ಆರೋಪಿ ಸಂಜಯ್ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಲು ಯತ್ನಿಸಿದ್ದನು. ತಕ್ಷಣವೇ ಇನ್ಸ್ಪೆಕ್ಟರ್ ಅಜಯ್ ಸಾರಥಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಆತನನ್ನು ಶರಣಾಗುವಂತೆ ಸೂಚಿಸಿದ್ದಾರೆ.
ಆದರೂ, ಆತ ಮತ್ತೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಎದುರಾಳಿ ಡ್ಯಾನಿಯಲ್ ಗ್ಯಾಂಗ್ ಜತೆಗೆ ಗಲಾಟೆ ಮಾಡಿಕೊಂಡಿದ್ದ ಬಾಗಲೂರು ಲೇಔಟ್‌ನ ರೌಡಿಶೀಟರ್ ಬುಜ್ಜಿಯನ್ನು (30) ಶನಿವಾರ ಕೊಲೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


