ಸಚಿವಾಲಯದ ನೌಕರರಿಗೆ ಬಿಎಂಟಿಸಿ ಬಸ್ ಸೌಲಭ್ಯ: ಪ್ರತಿ ಬಸ್ಸಿನಲ್ಲಿ 20 ಪ್ರಯಾಣಿಕರಿಗೆ ಮಾತ್ರ ಅವಕಾಶ
ಕೆಎಸ್‌ಆರ್‌ಟಿಸಿ ಬಸ್ ಲಾಕ್‌ಡೌನ್‌ನಿಂದಾಗಿ ಅಲ್ಲಲ್ಲಿ ಉಳಿದಿರುವ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕೆಲಸದಲ್ಲಿ ನಿರತವಾಗಿದ್ದರೆ ಇತ್ತ ಬಿಎಂಟಿಸಿ ಬಸ್‌ಗಳು ಕರ್ನಾಟಕ ಸಚಿವಾಲಯದ ನೌಕರರನ್ನು ಸರ್ಕಾರಿ ಕಚೇರಿಗಳಿಗೆ ತಲುಪಿಸುವ ಕಾರ್ಯ ಆರಂಭಿಸಿದೆ

ಬೆಂಗಳೂರು:ಕೆಎಸ್‌ಆರ್‌ಟಿಸಿ ಬಸ್ ಲಾಕ್‌ಡೌನ್‌ನಿಂದಾಗಿ ಅಲ್ಲಲ್ಲಿ ಉಳಿದಿರುವ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕೆಲಸದಲ್ಲಿ ನಿರತವಾಗಿದ್ದರೆ ಇತ್ತ ಬಿಎಂಟಿಸಿ ಬಸ್‌ಗಳು ಕರ್ನಾಟಕ ಸಚಿವಾಲಯದ ನೌಕರರನ್ನು ಸರ್ಕಾರಿ ಕಚೇರಿಗಳಿಗೆ ತಲುಪಿಸುವ ಕಾರ್ಯ ಆರಂಭಿಸಿದೆ
ಎರಡನೇ ಹಂತದ ಲಾಕ್‌ಡೌನ್ ಮುಗಿಯುತ್ತಿದ್ದಂತೆ ಎಲ್ಲಾ ಸರ್ಕಾರಿ ಕಚೇರಿಗಳು ಕಾರ್ಯಾರಂಭ ಮಾಡಿವೆ.ಆದ್ದರಿಂದ ನಗರದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ನೌಕರರು,ಸಿಬ್ಬಂದಿಯನ್ನು ಅವರ ಕಚೇರಿಗೆ ತಲುಪಿಸಲು ಬಿಎಂಟಿಸಿ ಸಾರಿಗೆ ಸೌಲಭ್ಯ ಕಲ್ಪಿಸಿದೆ
ಪೂರ್ವ ವಲಯ, ಪಶ್ಚಿಮ ವಲಯ, ಉತ್ತರ ವಲಯ, ದಕ್ಷಿಣ ವಲಯ ಮತ್ತು ಈಶಾನ್ಯ ವಲಯ ಮುಂತಾದ ಪ್ರದೇಶಗಳಿಂದ ವಿಧಾನಸೌಧಕ್ಕೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬರುವ ನೌಕರರು ಮತ್ತು ಸಿಬ್ಬಂದಿಗೆ ಅನುಕೂಲವಾಗಲಿದೆ.
ಈ ಬಸ್‌ಗಳಲ್ಲಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ಸಾರ್ವಜನಿಕರಿಗೆ ಪ್ರಯಾಣಿಸಲು ಅವಕಾಶವಿಲ್ಲ.ಈ ವಾಹನಗಳಲ್ಲಿ ಪ್ರಯಾಣಿಸುವ ಸಿಬ್ಬಂದಿ ಮುಖಗವಸು ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರತಿ ಬಸ್ಸಿನಲ್ಲಿ ಗರಿಷ್ಠ 20 ಪ್ರಯಾಣಿಕರಿಗೆ ಮಾತ್ರ ಅವಕಾಶವಿರುತ್ತದೆ. ಮಾರ್ಗಗಳಲ್ಲಿ ಮಾರ್ಗಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


