ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ ಇನ್ನೂ 2 ದಿನ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ
ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳುವುದಿತ್ತು, ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ರವಿವಾರದಂದು 951 ಕೆ.ಎಸ್.ಆರ್.ಟಿ.ಸಿ. ಬಸ್ ಗಳನ್ನು ಒದಗಿಸಲಾಗಿದ್ದು, ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.
ಇಂದು ಈಗಾಗಲೇ 50 ಬಸ್ ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ. ಶನಿವಾರದಂದು ಕೂಡ 550 ಬಸ್‌ಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರವಿವಾರದಂದು ಎರಡು ರೈಲುಗಳು ಬಿಹಾರದ ಪಾಟ್ನಾ ಒಂದು ಜಾರ್ಖಂಡ್‌ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಸ್ಸಾದ ಭುವನೇಶ್ವರಕ್ಕೆ ಒಂದು ರೈಲು, ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ.
ಸೋಮವಾರದಂದು ಎರಡು ರೈಲುಗಳು ರಾಜಸ್ತಾನದ ಜೈಪುರ್ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲಾ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


