ವಲಸೆ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ: ಕುಮಾರಸ್ವಾಮಿ
ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು: ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸುವುದು ಸವಾಲಿನ ವಿಷಯವೇ, ಹಾಗಂತ ಅವರ ಆರೋಗ್ಯವನ್ನು ಅಪಾಯಕ್ಕೆ ತಳ್ಳಬಾರದು ಎಂದು ಹೇಳಿದ್ದಾರೆ. "ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್‌ಡೌನ್‌ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೇ ಸಡಿಲ ಮಾಡಲಾಗಿದೆ. ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇಷ್ಟು ದಿನ ಸಾವಿರಾರು ಕೋಟಿ ರೂಪಾಯಿಗಳನ್ನು ನಷ್ಟ ಮಾಡಿಕೊಂಡು ಪಾಲಿಸಲಾದ ಲಾಕ್‌ಡೌನ್‌ನಿಂದ ಗಳಿಸಿಕೊಂಡಿದ್ದನ್ನು ಸರ್ಕಾರ ಒಂದು ಅವೈಜ್ಞಾನಿಕ ನಡೆಯಿಂದ ಕಳೆದುಕೊಳ್ಳಬಾರದು. ಕಾರ್ಮಿಕರು ಮತ್ತು ಹಳ್ಳಿಗಳು ಸೌಖ್ಯವಾಗಿರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕಾರ್ಮಿಕರನ್ನು ಊರುಗಳಿಗೆ ತಲುಪಿಸುವುದು ಆಗಬೇಕಾದ ಕಾರ್ಯವೇ. ಆದರೆ, ಈ ಕಾರ್ಯದಲ್ಲಿ ಅವರ ಆರೋಗ್ಯಕ್ಕೆ ಅಪಾಯ ಎದುರಾಗಬಾರದು. ಅವರ ಹಿತಕ್ಕಾಗಿ ಕೈಗೊಂಡ ಈ ನಿರ್ಧಾರವೇ ಅವರಿಗೆ ಸಂಚಕಾರವಾಗಿ ಪರಿಣಮಿಸಬಾರದು. ಬಸ್ ಗಳಲ್ಲೂ ದೈಹಿಕ ಅಂತರ ಪಾಲನೆಯಾಗಲಿ, ಸೂಕ್ತ ರೀತಿಯ ಪರೀಕ್ಷೆಗಳು ನಡೆಯಲಿ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


