ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ
ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ಆಗಮಿಸುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿಯೇ ನಿರ್ವಹಿಸಲು ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿತ್ತು. ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದ ಎಂದೂ ಕೂಡ ತಿಳಿಸಲಾಗಿತ್ತು.
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪೋಷಕರು ಕಂತುಗಳ ಮೂಲಕ ಕಾಲೇಜು ಶುಲ್ಕ ಪಾವತಿಸಲು ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು. 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ಈ ಹಿಂದೆ ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


