ವಿಜಯಪುರದಲ್ಲಿ ಕೊರೋನಾ ಸೋಂಕಿಗೆ ಮೂರನೇ ವ್ಯಕ್ತಿ ಸಾವು
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮಂಗಳವಾರ ಮತ್ತೊಂದು ಬಲಿ ಪಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.

ವಿಜಯಪುರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮಂಗಳವಾರ ಮತ್ತೊಂದು ಬಲಿ ಪಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.
ಮಂಗಳವಾರ 640ನೇ ಕೊರೊನಾ ಪೀಡಿತ 62 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.
ಸೋಂಕಿತರು ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ರೋಗಿ ಸಂಖ್ಯೆ 228 ಸಂಪರ್ಕದಿಂದ ಮೃತ ಮಹಿಳೆಗೆ ಸೋಂಕು ತಗುಲಿತ್ತು. 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 47 ಪ್ರಕರಣಗಳು ವರದಿಯಾಗಿದ್ದು ಅದರಲ್ಲಿ ಮೂವರು ಸಾವನ್ನಪ್ಪಿದ್ದರೆ 19 ಮಂದಿ ಗುಣಮುಖರಾಗಿದ್ದಾರೆ.
ಇದೀಗ ಮೃತ ಮಹಿಳೆಯ ಅಂತ್ಯ ಸಂಸ್ಕಾರವನ್ನು ವೈದ್ಯಕೀಯ, ಧಾರ್ಮಿಕ ಶಿಷ್ಠಾಚಾರದ ಅನುಸಾರ ನಡೆಸಲಾಗಿದೆ. ಇದಕ್ಕೆ ಹಿಂದೆ ಜಿಲ್ಲೆಯಲ್ಲಿ ಇಬ್ಬರು ಕೊರೋನಾ ಸೋಂಕಿತರು ಸಾವಿಗೀಡಾಗಿದ್ದರು.ರೋಗಿ 257 (69 ವರ್ಷ)ದ ವೃದ್ಧ ಹಾಗೂ ರೋಗಿ ನಂಬರ್ 374 (42 ವರ್ಷ)ದ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


