ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ಭೂಪ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ದೊಣ್ಣೆ ಯಿಂದ ಹೊಡೆದು ಭೀಕರವಾಗಿ‌ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಜೀವನ್ ಭೀಮಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ಭೂಪ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ದೊಣ್ಣೆ ಯಿಂದ ಹೊಡೆದು ಭೀಕರವಾಗಿ‌ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಜೀವನ್ ಭೀಮಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೊಮ್ಮಲೂರಿನ ಶ್ರೀನಿವಾಸ್ (45) ಕೊಲೆಯಾದವರು, ಕೃತ್ಯ ವೆಸಗಿದ ಸಂತೋಷ್ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿ ಸಂತೋಷ್ ಹಾಗೂ ಕೊಲೆಯಾದ ಶ್ರೀನಿವಾಸ್ ಇಬ್ಬರು ಸ್ನೇಹಿತರಾಗಿದ್ದು, ನಿನ್ನೆ ಬೆಳಗ್ಗೆ ಮದ್ಯದಂಗಡಿ ತೆರೆದ ಕೂಡಲೇ ಸರತಿ ನಿಂತು ಮದ್ಯ ಖರೀದಿಸಿದ್ದರು. ದೊಮ್ಮಲೂರಿನ ತಮ್ಮ ಮನೆಯ ಬಳಿ ಇಬ್ಬರು ಸೇರಿ ಮದ್ಯಪಾನ ಮಾಡಿದ್ದಾರೆ. ಕುಡಿತದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು ಅವಾಚ್ಯ ಶಬ್ದ ಗಳಿಂದ ಸಂತೋಷ್ ನನ್ನು ಶ್ರೀನಿವಾಸ್ ನಿಂದಿಸಿದ್ದಾನೆ.

ಆಕ್ರೋಶಗೊಂಡ ಸಂತೋಷ್ ದೊಣ್ಣೆಯಿಂದ ಶ್ರೀನಿವಾಸ್ ತಲೆಗೆ ಬಲವಾಗಿ ಹೊಡೆದಿದ್ದಾನೆ.

ಗಾಯಗೊಂಡು ತಲೆಯಲ್ಲಿ ರಕ್ತಸ್ರಾವವಾಗಿದ್ದ ಅಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಾಪಸ್ಸು ಮನೆಗೆ ಮರಳಿದ್ದ ಶ್ರೀನಿವಾಸ್ ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟಿದ್ದ ಎಂದು ತಿಳಿಸಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ಪರಿಶೀಲನೆ ನಡೆಸಿದ ಜೀವನ್ ಭೀಮಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಂದು ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಅವರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.