ಸಿಸಿಬಿ ಭರ್ಜರಿ ಕಾರ್ಯಾಚರಣೆ: 1.5 ಕೋಟಿ ಮೌಲ್ಯದ ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್ ವಶ, 70 ಮಂದಿ ಬಂಧನ
ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್ ಸೇರಿದಂತೆ ರೂ.1.5 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್ ಸೇರಿದಂತೆ ರೂ.1.5 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.
ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದಂತೆಯೇ ನಕಲಿ ಮಾಸ್ಕ್, ನಕಲಿ ಸ್ಯಾನಿಟೈಸರ್, ಅಕ್ರಮ ಮದ್ಯ, ಜೂಜು ಅಡ್ಡೆ ಪ್ರಕರಣಗಳು ಹೆಚ್ಚಾಗಿದ್ದು, ಇದರ ವಿರುದ್ಧ ಸುಮಾರು 51 ದಾಳಿಗಳನ್ನು ನಡೆಸಿರುವ ಪೊಲೀಸರು ರೂ.1.5 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ದಾಳಿ ವೇಳೆ ಸುಮಾರು 70 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


