ಚಾಮರಾಜನಗರ: ಹಾಡಹಗಲೇ ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥ ಬಲಿ
ಕಾಡಾನೆಯೊಂದು ದಾಳಿ ಮಾಡಿ ಮಾನಸಿಕ ಅಸ್ವಸ್ಥನೊಬ್ಬನನ್ನು ಬಲಿ ಪಡೆದಿರುವ ಘಟನೆ ಚಾಮರಾಜನಗರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-209ರ ದೊಡ್ಡ ಮೂಡಲಹಳ್ಳಿ ಬಳಿ ನಡೆದಿದೆ.

ಚಾಮರಾಜನಗರ: ಕಾಡಾನೆಯೊಂದು ದಾಳಿ ಮಾಡಿ ಮಾನಸಿಕ ಅಸ್ವಸ್ಥನೊಬ್ಬನನ್ನು ಬಲಿ ಪಡೆದಿರುವ ಘಟನೆ ಚಾಮರಾಜನಗರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-209ರ ದೊಡ್ಡ ಮೂಡಲಹಳ್ಳಿ ಬಳಿ ನಡೆದಿದೆ.
ಕಳೆದ ಒಂದು ತಿಂಗಳಿನಿಂದಲೂ ಈ ರಾಷ್ಟ್ರೀಯ ಹೆದ್ದಾರಿಯಲ್ಲೇ ಮಾನಸಿಕ ಅಸ್ವಸ್ಥ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದ್ದು, ರಸ್ತೆ ಬದಿ ನಿಂತಿದ್ದ ಮಾನಸಿಕ ಅಸ್ವಸ್ಥನ ಮೇಲೆ ಕಾಡಾನೆ ದಾಳಿ ಮಾಡಿ ಬಲಿ ಪಡೆದಿದೆ.
ಮಾನಸಿಕ ಅಸ್ವಸ್ಥನ ಗುರುತು ಪತ್ತೆ ಹಚ್ಚಲು ಚಾಮರಾಜನಗರದ ಪೂರ್ವ ಠಾಣೆ ಪೊಲೀಸರು ಮುಂದಾಗಿದ್ದಾರೆ. ಬಿಆರ್ಟಿ ಹುಲಿ ಯೋಜನೆ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


