ಕೊರೋನಾ ಸೋಂಕು ನಿಯಂತ್ರಣಕ್ಕೆ ರೋಗ ನಿರೋಧಕ ಶಕ್ತಿಯೇ ರಾಮಬಾಣ: ಶ್ರೀರಾಮುಲು
ಜಾಗತಿಕವಾಗಿ ಕೊರೋನಾ ಸೋಂಕು ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ರೋಗ ನಿರೋಧಕ ಶಕ್ತಿಯೇ ಸೋಂಕಿಗೆ ರಾಮಬಾಣ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ

ಬೆಂಗಳೂರು: ಜಾಗತಿಕವಾಗಿ ಕೊರೋನಾ ಸೋಂಕು ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ರೋಗ ನಿರೋಧಕ ಶಕ್ತಿಯೇ ಸೋಂಕಿಗೆ ರಾಮಬಾಣ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ
ನಗರದಲ್ಲಿಂದು ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆಯ ಸಲಹಾ ಸೂಚಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡದ ಅವರು, ಸೋಂಕಿನೊಂದಿಗೆ ಬದುಕುವ ಕಲೆಯನ್ನು ರೂಢಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದು, ರೋಗ ನಿರೋಧಕ ಶಕ್ತಿಯೇ ನಮಗೆ ರಕ್ಷಾ ಕವಚ ಎಂದರು
ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತ ಸೋಂಕು ನಿಯಂತ್ರಣದಲ್ಲಿ ಉತ್ತಮ ಸಾಧನೆ ಮಾಡಿದೆ. ಇದೇ ರೀತಿ ಕರ್ನಾಟಕ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಪರಿಣಾಮಕಾರಿ ಕ್ರಮಗಳ ಮೂಲಕ ಸೋಂಕು ನಿಯಂತ್ರಿಸುತ್ತಿದೆ ಎಂದರು.
ಕೊರೋನಾ ಸೋಂಕು ತಡೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಆಯುಷ್ ಇಲಾಖೆ ಪ್ರಕಟಿಸಿದ್ದ ಮಾರ್ಗಸೂಚಿಗಳ ಅನ್ವಯ ಈ ಪುಸ್ತಕ ಹೊರತರಲಾಗಿದೆ. ಇದು ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಶ್ರೀರಾಮುಲು ಪೊಲೀಸ್ ಸಿಬ್ಬಂದಿಗೆ ಆರೋಗ್ಯ ವೃದ್ಧಿಗಾಗಿ ಆಯುಷ್ ಇಲಾಖೆ ಸಲಹೆ ಮಾಡಿರುವ ಪರಿಕರಗಳನ್ನು ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


