ಮೂರ್ನಾಲ್ಕು ದಿನಗಳಲ್ಲಿ ಸಾರಿಗೆ ನೌಕರರ ವೇತನ ಪಾವತಿ, ಆತಂಕ ಬೇಡ: ಲಕ್ಷ್ಮಣ ಸವದಿ
ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡದೇ ಸಾರಿಗೆ ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವದ ಭಯ ತೊರೆದು ವೈದ್ಯರು, ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಅಂತಹ ಸಿಬ್ಬಂದಿಗಳಿಗೆ ಹಾಗೂ ಆ ತಂಡಕ್ಕೆ ಅಭಿನಂದನೆ ಸಲ್ಲಿಸುವ ಕೆಲಸವನ್ನು ಸರ್ಕಾರದ ವತಿಯಿಂದ ಮಾಡಿದ್ದೇವೆ ಎಂದರು.
ಸಾರಿಗೆ ಸಿಬ್ಬಂದಿಗಳ ವೇತನವನ್ನು ಮೂರು-ನಾಲ್ಕು ದಿನಗಳಲ್ಲಿ ಅವರವರ ಅಕೌಂಟ್ ಗಳಿಗೆ ತಲುಪಿಸುತ್ತೇವೆ. ಸಿಬ್ಬಂದಿಗಳಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ.
ಸಾರಿಗೆ ಸಿಬ್ಬಂದಿಗಳ ವೇತನ ಸಂಬಂಧ ನಾನೀಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಡನೆ ಮಾತನಾಡಿದ್ದೇನೆ. ಸರ್ಕಾರದಿಂದ ನೇರವಾಗಿ 326 ಕೋಟಿ ರೂಪಾಯಿ ಪಡೆದುಕೊಂಡು ವೇತನ ನೀಡುವ ಕೆಲಸ ಮಾಡಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಇದೇ ವೇಳೆ ವಲಸೆ ಕಾರ್ಮಿಕರಿಗೆ ಅವರವರ ಊರಿಗೆ ತೆರಳುವ ಸಲುವಾಗಿ ಸಾರಿಗೆ ಸಂಸ್ಥೆ ನೀಡಿರುವ ಉಚಿತ ಪ್ರಯಾಣ ಸೌಲಭ್ಯ ನಾಳೆ ಕೊನೆಗೊಳ್ಲಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


