ವಿಜಯಪುರ: ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು
ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದೆ.

ವಿಜಯಪುರ: ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದೆ.
ಮಂಗಳವಾರ ತಡರಾತ್ರಿ ನಡೆದ ಘಟನೆ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ವಿಜಯಪುರ ನಗರ ನಿವಾಸಿಗಳಾದ ಸಿದ್ದರಾಮ ಭೈರೊಡಗಿ(30) ಹಾಗೂ ವಿಜಯಕುಮಾರ ಧುಳಂಗೆ(32) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು ಗಾಯಾಳುಗಳಾದ ನವೀನ್ ಹಾಗೂ ರವಿ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ವಿಜಯಪುರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


