ರಾಜ್ಯ

ಬೆಂಗಳೂರು: ಶಿವಾಜಿನಗರದಲ್ಲಿ 4, ಪಾದರಾಯನಪುರದಲ್ಲಿ ಮತ್ತೆ 2 ಪ್ರಕರಣ ಪತ್ತೆ, ಹೆಚ್ಚಿದ ಆತಂಕ!

ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಹೌಸ್ ಕೀಪರ್ ನಿಂದಾಗಿ ಇದೀಗ ಶಿವಾಜಿನಗರದಲ್ಲಿ ಮತ್ತೆ ನಾಲ್ವರಿಗೆ ಸೋಂಕು ತಗುಲಿದೆ. ಇನ್ನು ಪಾದರಾಯನಪುರದಲ್ಲೂ ಇಬ್ಬರಿಗೆ ಸೋಂಕು ತಲುಗಿದ್ದು ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಶಿವಾಜಿನಗರದಲ್ಲಿ 4, ಪಾದರಾಯನಪುರದಲ್ಲಿ ಮತ್ತೆ 2 ಪ್ರಕರಣ ಪತ್ತೆ, ಹೆಚ್ಚಿದ ಆತಂಕ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಶಿವಾಜಿನಗರದಲ್ಲಿ 4, ಪಾದರಾಯನಪುರದಲ್ಲಿ ಮತ್ತೆ 2 ಪ್ರಕರಣ ಪತ್ತೆ, ಹೆಚ್ಚಿದ ಆತಂಕ!
ಬೆಂಗಳೂರು: ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಹೌಸ್ ಕೀಪರ್ ನಿಂದಾಗಿ ಇದೀಗ ಶಿವಾಜಿನಗರದಲ್ಲಿ ಮತ್ತೆ ನಾಲ್ವರಿಗೆ ಸೋಂಕು ತಗುಲಿದೆ. ಇನ್ನು ಪಾದರಾಯನಪುರದಲ್ಲೂ ಇಬ್ಬರಿಗೆ ಸೋಂಕು ತಲುಗಿದ್ದು ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. 

ಶಿವಾಜಿನಗರದಲ್ಲಿ ಕ್ವಾರಂಟೈನ್ ಗೆ ಒಳಗಾದವರನ್ನು ಇಟ್ಟಿದ್ದ ಹೊಟೇಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸದಲ್ಲಿದ್ದ ವ್ಯಕ್ತಿಗೆ ಸೋಂಕು ತಗುಲಿತ್ತು. ಇದೀಗ ಈತನಿಂದ ಮತ್ತೆ ನಾಲ್ವರಿಗೆ ಸೋಂಕು ತಗುಲಿದೆ. ಇದೇ ವೇಳೆ ಪಾದರಾಯನಪುರದಲ್ಲೂ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದು ಒಂದೇ ದಿನ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಪಾದರಾಯನಪುರದಲ್ಲಿ 48 ಮಂದಿಗೆ ರ್ಯಾಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರಲ್ಲಿ ಇಬ್ಬರ ಟೆಸ್ಟ್ ನಲ್ಲಿ ಕೋವಿಡ್-19 ಪಾಸಿಟಿವ್ ಬಂದಿದೆ ಎಂದು ಸಿಎಚ್ಒ ವಿಜಯೇಂದ್ರ ತಿಳಿಸಿದ್ದಾರೆ. 

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 711ಕ್ಕೆ ಏರಿಕೆಯಾಗಿದೆ. ಈ ಪೈಕಿ 30 ಮಂದಿ ಸಾವನ್ನಪ್ಪಿದ್ದರೆ, 366 ಮಂದಿ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.