ರಾಜ್ಯ

ಬೆಂಗಳೂರು: ಗೆಳೆಯನನ್ನು ಕೊಂದು ಸ್ನೇಹಿತ ಪರಾರಿ

ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿದ್ದ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆರ್.ಟಿ. ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಬೆಂಗಳೂರು: ಗೆಳೆಯನನ್ನು ಕೊಂದು ಸ್ನೇಹಿತ ಪರಾರಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿದ್ದ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆರ್.ಟಿ. ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯ ಬಳಿ ಬುಧವಾರ ತಡರಾತ್ರಿ ನಡೆದಿದೆ.

28 ವರ್ಷದ ಕಿಶೋರ್ ಕೊಲೆಯಾದ ಯುವಕ.  ಕೊಲೆಯಾದ ಕಿಶೋರ್ ಹಾಗೂ ಆತನ ಸ್ನೇಹಿತ ರಾಜೇಶ್ ಪಾರ್ಟಿ ಮಾಡಿದ್ದು, ಮದ್ಯದ ನಶೆಯಲ್ಲಿದ್ದ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಜಗಳ  ತಾರಕಕ್ಕೇರಿದ ಪರಿಣಾಮ ಕಿಶೋರ್ ಎದೆ ಭಾಗಕ್ಕೆ ಆತನ ಸ್ನೇಹಿತ ಹರಿತವಾದ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.