ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸರ್ಕಾರ
ಇತ್ತೀಚೆಗೆ ಗರ್ಭಿಣಿಯರಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಮಾಡಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಇತ್ತೀಚೆಗೆ ಗರ್ಭಿಣಿಯರಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಮಾಡಿಸಲು ನಿರ್ಧರಿಸಲಾಗಿದೆ.ಅವರಿಗೆ ಸೋಂಕಿನ ಲಕ್ಷಣಗಳಿರಲಿ ಅಥವಾ ಇಲ್ಲದಿರಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸುವುದು ಅಗತ್ಯವಾಗಿದೆ. ಗರ್ಭಿಣಿ ಕುಟುಂಬದ ಸದಸ್ಯರು ಮತ್ತು ಇತರರ ಸಂಪರ್ಕಗಳನ್ನು ಪರೀಕ್ಷಿಸಲಾಗುವುದು ಮತ್ತು ಅವರೆಲ್ಲರ ವಿವರವಾದ ಆರೋಗ್ಯ ವರದಿ ಕಾರ್ಡ್ ಅನ್ನು ನಿರ್ವಹಿಸಲಾಗುವುದು
ಎಂದು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಕಳೆದ ಮೂರು ತಿಂಗಳಲ್ಲಿ ಗರ್ಭಿಣಿ ಮಹಿಳೆಗೆ ಮಾತ್ರ ಪರೀಕ್ಷೆ ಮಾಡಲಾಗಿತ್ತು, ಅಂತಹ ಮಹಿಳೆಗೆ ಮತ್ತೆ ಪರೀಕ್ಷೆ ಮಾಡಲಾಗುವುದು, ಜೊತೆಗೆ ಆಕೆಯ ಕುಟುಂಬದ ಸದಸ್ಯರಿಗೂ ಪರೀಕ್ಷೆ ಕಡ್ಡಾಯವಾಗಿದೆ ಎಂದು ಹಿರಿಯ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,
ಹಾಲುಣಿಸುತ್ತಿರುವ ಮಹಿಳೆಯರಿಗೊ ಪರೀಕ್ಷೆ ನಡೆಸಲು ಬಿಬಿಎಂಪಿ ಸಿದ್ಧತೆ ನಡೆಸುತ್ತಿದೆ. ಗರ್ಭಿಣಿಯರು ಮತ್ತು ಹಾಲುಣಿಸು ಮಹಿಳೆಯರು ದುರ್ಬಲರಾಗಿದ್ದು, ಅವರು ಪದೇ ಪದೇ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುತ್ತಿರುತ್ತಾರೆ. ಎಲ್ಲಾ ಆರೋಗ್ಯ ಕೇಂದ್ರಗಳಿಂದ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿಗಳಿಂದ ಅವರ ಬಗ್ಗೆಗಿನ ಮಾಹಿತಿ ಸಂಗ್ರಹಿಸಲಾಗುವುದು.
ಅಂತಿಮ ಹಂತದ ಪರೀಕ್ಷೆಗೆ ಬರುವ ಮಹಿಳೆಯರಲ್ಲಿ ಸೋಂಕು ಕಂಡು ಬಂದಲ್ಲಿ ತಾಯಿ ಮತ್ತು ಮಗುವಿನ ಜೀವ ಅಪಾಯದಲ್ಲಿರುತ್ತದೆ. ಹೀಗಾಗಿ ಪ್ರತಿ ಹಂತದಲ್ಲೂ ಗರ್ಭಿಣಿಯರಿಗೆ ಪರೀಕ್ಷೆ ಕಡ್ಡಾಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


