ರಾಜ್ಯ

ಸಕಲೇಶಪುರ: ಹೇಮಾವತಿ ನದಿ ಸಮೀಪ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ ನವದಂಪತಿಗಳು ನೀರುಪಾಲು

ಇತ್ತೀಚೆಗಷ್ಟೇ ಮದುವೆಯಾಗಿದ್ದ ದಂಪತಿಗಳು ನದಿಯ ಸಮೀಪ ಸೆಲ್ಫಿ ಕ್ಲಿಕ್ಕಿಸಲು ಹೋದಾಗ ಜಾರಿ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ.

ಸಕಲೇಶಪುರ: ಹೇಮಾವತಿ ನದಿ ಸಮೀಪ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ ನವದಂಪತಿಗಳು ನೀರುಪಾಲು
ಮೃತ ದಂಪತಿಗಳಾದ ಅರ್ಥೇಶ್ ಹಾಗೂ ಕೃತಿಕಾ
Published On :

ಹಾಸನ: ಸುತ್ತಾಡಿಕೊಂಡು ಬರುತ್ತೇವೆ ಎಂದು ಹೇಳಿ‌ ಹೋಗಿದ್ದ ನವದಂಪತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ.

ಬೇಲೂರು ತಾಲೂಕಿನ ಮುರಹಳ್ಳಿ ಗ್ರಾಮದ 27 ವರ್ಷದ ಅರ್ಥೇಶ್ ಹಾಗೂ ಹೆನ್ನಾಲಿ ಗ್ರಾಮದ 23 ವರ್ಷದ ಕೃತಿಕಾ ಮೃತ ದಂಪತಿ.
ಇವರು ಕಳೆದ 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ‌.

ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಇಬ್ಬರೂ ಅವರವರ ಊರಿಗೆ ತೆರಳಿದ್ದರು. ನಂತರ ಅರ್ಥೇಶ್, ತನ್ನ ಹೆಂಡತಿಯನ್ನು ಭೇಟಿಯಾಗಲು ಹೆನ್ನಾಲಿಗೆ ತೆರಳಿದ್ದನು. ಇಬ್ಬರೂ ಗುರುವಾರ ಸಂಜೆ ಹೊರಗೆ ಸುತ್ತಾಡಿಕೊಂಡು ಬರುವುದಾಗಿ ಹೇಳಿ ಬೈಕ್​ನಲ್ಲಿ ತೆರಳಿದ್ದರು.

ಆದರೆ, ರಾತ್ರಿಯಾದರೂ ಮಗಳು-ಅಳಿಯ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕೃತಿಕಾಳ ಮನೆಯವರು ನದಿಯ ಬಳಿ ಹೋಗಿ ನೋಡಿದಾಗ ಬೈಕ್ ನಿಂತಿರುವುದು ಕಂಡಿತ್ತು. ನಂತರ ಮೀನುಗಾರರಿಗೆ ಇಬ್ಬರ ಶವ ಪತ್ತೆಯಾಗಿದೆ.

ಇಬ್ಬರೂ ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. 
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ‌ ಕೈಗೊಂಡಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.