ರಾಜ್ಯ

ಬೆಂಗಳೂರು: ಹೂವಿನ ಅಂಗಡಿಗೆ ಆಕಸ್ಮಿಕ ಬೆಂಕಿ: 10 ಲಕ್ಷ ರೂ.‌ ನಷ್ಟ

ಹೂವಿನ ಅಲಂಕಾರ ಮಾಡುವ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ‌ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಹನುಮಂತನಗರದ ಪೈಪ್ ಲೈನ್ ರಸ್ತೆ ಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ಹೂವಿನ ಅಂಗಡಿಗೆ ಆಕಸ್ಮಿಕ ಬೆಂಕಿ: 10 ಲಕ್ಷ ರೂ.‌ ನಷ್ಟ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಹೂವಿನ ಅಲಂಕಾರ ಮಾಡುವ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ‌ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಹನುಮಂತನಗರದ ಪೈಪ್ ಲೈನ್ ರಸ್ತೆ ಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ನಗರದ ಪೈಪ್ ಲೈನ್ ರಸ್ತೆಯ ಹೂವಿನ ಅಲಂಕಾರ ಮಾಡುವ ಅಣ್ಣಮ್ಮ ಫ್ಲವರ್ ಡೆಕೋರೇಷನ್ ಅಂಗಡಿಗೆ ಬೆಳಗ್ಗೆ 3 ರ ಸುಮಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಲೇ ಇಡೀ ಅಂಗಡಿಯನ್ನು ಬೆಂಕಿ ಆವರಿಸಿ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು  ಕೂಡಲೇ ಅಗ್ನಿ ಶಾಮಕ‌ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳ ಮೂರು ವಾಹನಗಳು ಸತತ 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿ ‌ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಆಕಸ್ಮಿಕ ಬೆಂಕಿಯಿಂದ 10  ಲಕ್ಷ‌‌ ರೂ. ನಷ್ಟವಾಗಿದೆ ಎಂದು ಅಂಗಡಿ ಮಾಲೀಕ ನಾಗರಾಜ್ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.