ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯಿಂದ ಪ್ರತಿಭಟನೆ
ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳೂ ಸೇರಿ ಇನ್ನಿತರ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ದೂರಿದ್ದಾರೆ. ಇನ್ನು, ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕು ಅಧಿಕವಾಗಿದ್ದು, ಅಲ್ಲಿಯ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಆಕೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ಓಡಾಡಿದ್ದು, ಹೀಗಾಗಿ ವೈದ್ಯಕೀಯ ಸಿಬ್ಬಂದಿ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಆಡಳಿತ ಮಂಡಳಿ ತಮಗೆ ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳಂಥ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಕಾರರು ಪ್ರಶ್ನಿಸುತ್ತಿದ್ದಾರೆ. ವೈದ್ಯಕೀಯ ಸಿಬ್ಬಂದಿ, ಪಿಜಿ ವಿದ್ಯಾರ್ಥಿಗಳು, ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


