ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ
ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫ್ಲೈಟ್ ನಂ-ಐಎಕ್ಸ್ 0384 ವಿಮಾನ ದುಬೈಯಿಂದ 16.10ಕ್ಕೆ ಹೊರಟು ಮಂಗಳೂರಿಗೆ 21.10ಕ್ಕೆ ತಲುಪಲಿದೆ ಎಂದಿದ್ದಾರೆ.
ಲಾಕ್ ಡೌನ್‌ನಿಂದಾಗಿ ವಿದೇಶದಲ್ಲಿ ಉಳಿದಿರುವ ಭಾರತೀಯರನ್ನು ಭಾರತಕ್ಕೆ ಕರೆ ತರಲು ಏರ್ ಇಂಡಿಯಾ ವಿಮಾನವು ಮೇ 14 ರಂದು ಸಂಜೆ 4:10 ದುಬೈಯಿಂದ ಹೊರಡಲಿದ್ದು, ಮಂಗಳೂರಿಗೆ ರಾತ್ರಿ 9:10 ಕ್ಕೆ ಆಗಮಿಸಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು.
ಆದರೆ ಇದೀಗ ಎರಡು ದಿನ ಮೊದಲು ಈ ವಿಮಾನ ಹೊರಡಲಿದೆ. ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು, ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ವಿಮಾನದಲ್ಲಿ ಆಗಮಿಸಲಿರುವ ಪ್ರಯಾಣಿಕರಲ್ಲಿ ಮಂಗಳೂರಿನವರಿಗೆ ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು. ಉಳಿದಂತೆ ಉಡುಪಿ ಜಿಲ್ಲೆಯ ಹಾಗು ಕೇರಳ ಭಾಗದ ಜನರಿಗೆ ಅವರ ಭಾಗದಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


