ಲಾಕ್ ಡೌನ್ ನಡುವೆ ಮನೆಗೆ ಬಂದ ಹೊಸ ಅತಿಥಿಗಳಿಗೆ ನಾಮಕರಣ ಮಾಡಿದ ಬಿಎಸ್ ವೈ!
ಲಾಕ್ ಡೌನ್ ನಡುವೆ ಕಳೆದ ವಾರ ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ನೂತನ ಅತಿಥಿಗಳಿಗೆ ನಾಮಕರಣ ಮಾಡಿದ್ದಾರೆ.

ಬೆಂಗಳೂರು: ಲಾಕ್ ಡೌನ್ ನಡುವೆ ಕಳೆದ ವಾರ ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ನೂತನ ಅತಿಥಿಗಳಿಗೆ ನಾಮಕರಣ ಮಾಡಿದ್ದಾರೆ.
ಕಳೆದ ಶುಭ ಶುಕ್ರವಾರದಂದು ಯಲಹಂಕ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರಿಗೆ ಗಿರ್ ತಳಿಯ ಹಸುಗಳನ್ನು ಉಡುಗೊರೆಯಾಗಿ ನೀಡಿದ್ದರು.
ಶನಿವಾರ ಹೊಸ ಅತಿಥಿಗಳಿಗೆ ನಾಮಕರಣ ಮಾಡಿದ ಮುಖ್ಯಮಂತ್ರಿಗಳು, ಹಾಲು ಕೊಡುವ ಹಸುವಿಗೆ ಕಾವೇರಿ ಹಾಗೂ ಇನ್ನೊಂದು ಹಸುವಿಗೆ ಕೃಷ್ಣೆ ಎಂದು ಮತ್ತು ಕರುವಿಗೆ ಭೀಮ ಎಂದು ನಾಮಕರಣ ಮಾಡಿದ್ದಾರೆ.
ಪ್ರತಿ ದಿನ ಬೆಳಗ್ಗೆ ಮುಖ್ಯಮಂತ್ರಿಗಳು ವಾಯುವಿಹಾರಕ್ಕೆ ಭೀಮನನ್ನು ಒಂದು ರೌಂಡ್ ಕರೆದುಕೊಂಡು ಹೋಗುತ್ತಾರೆ.
ಸದ್ಯ ಹಸುಗಳು ಹೊಸ ಮನೆಗೆ ಹೊಂದಿಕೊಳ್ಳುತ್ತಿದ್ದು, ಅತಿಥಿಗಳಿಗಾಗಿ ಮುಖ್ಯಮಂತ್ರಿ ಗಳು ಕಾವೇರಿ ನಿವಾಸದಲ್ಲಿ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಿ ಆತ್ಮೀಯವಾಗಿ ನೋಡಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ತಮ್ಮ ನಿವಾಸದಲ್ಲಿ ಬೆಕ್ಕಿಗೆ ಹಾಲು ನೀಡಿ, ಲಾಕ್ ಡೌನ್ ಸಂದರ್ಭದಲ್ಲಿ ಮೂಕಪ್ರಾಣಿಗಳಿಗೆ ಆಹಾರ ನೀಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


