ಕೊರೋನಾ: ನೆಮ್ಮದಿಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ - ಸಿಸಿ ಪಾಟೀಲ್
ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ ಒಂದು ಹಂತದ ನೆಮ್ಮದಿ ನೀಡಿದೆ.

ಗದಗ: ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ ಒಂದು ಹಂತದ ನೆಮ್ಮದಿ ನೀಡಿದೆ.
ಆದರೆ ಕೊವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾದ ಕುರಿತು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ.
ಕೊವಿಡ್-19 ಸೋಂಕಿನ ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ, ಆಗಾಗ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು. ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು.
ಕೊವಿಡ್-19 ಈಗ ದೇಶದ ಸರ್ಕಾರದ ಸಮಸ್ಯೆ ಮಾತ್ರವಲ್ಲ ಪ್ರತಿ ವ್ಯಕ್ತಿ, ಕುಟುಂಬ, ಸಮಾಜಗಳ ಅಳಿವು ಉಳಿವಿನ ಪ್ರಶ್ನೆ ಎಂಬುದನ್ನು ನಾವು ಅರಿತುಕೊಂಡು ತಪ್ಪದೇ ವೈಯಕ್ತಿಕ, ಸಾಮಾಜಿಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


