ಕಾರು, ಬೈಕ್ ಮುಖಾಮುಖಿ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಸಮೀಪ ನಡೆದಿದೆ.

ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಸಮೀಪ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ ಶಿವು ಹಾಗೂ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡ್ಲುಪೇಟೆ- ಮೈಸೂರು ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಚಾಮರಾಜನಗರ ಮೂಲಕ ಮಡಿಕೇರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ.
ವರದಿ: ಗೂಳಿಪುರ ನಂದೀಶ್ .ಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


