ರಾಜ್ಯ

ಮೇ 13 ರಿಂದ ಮೂರು ದಿನಗಳ ಕಾಲ ಹೈಕೋರ್ಟ್ ಗೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಲು ಅವಕಾಶ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ ಹೈಕೋರ್ಟ್ ನಲ್ಲಿ ಮೇ 13ರಿಂದ ಮೂರು ದಿನಗಳ ಕಾಲ ಕಕ್ಷಿದಾರರು, ವಕೀಲರು ಖುದ್ದು ಹಾಜರಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮೇ 13 ರಿಂದ ಮೂರು ದಿನಗಳ ಕಾಲ ಹೈಕೋರ್ಟ್ ಗೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಲು ಅವಕಾಶ
ಹೈಕೋರ್ಟ್
Published On :

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ ಹೈಕೋರ್ಟ್ ನಲ್ಲಿ ಮೇ 13ರಿಂದ ಮೂರು ದಿನಗಳ ಕಾಲ ಕಕ್ಷಿದಾರರು, ವಕೀಲರು ಖುದ್ದು ಹಾಜರಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

ಮೇ 13, 14 ಹಾಗೂ 15ರಂದು ಪ್ರಾಯೋಗಿಕವಾಗಿ ಈ ಅವಕಾಶ ಒದಗಿಸಲಾಗಿದೆ. ವಕೀಲರು, ಸಾರ್ವಜನಿಕರು ಮತ್ತು ಕ್ಲರ್ಕ್ ಗಳು ಖುದ್ದು ಹಾಜರಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಇಮೇಲ್ ಮೂಲಕ ವಿಚಾರಣೆಯ ವಿವರ ಪಡೆಯಬಹುದಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಮಾಹಿತಿ ನೀಡಿದ್ದಾರೆ. 

ಆದರೆ, ಈ ಸಮಯದಲ್ಲಿ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ, ಇತರ ಲಾಕ್ ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.