ರಾಜ್ಯ

ಅಥಣಿ: ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ

ಸಾಲಕ್ಕೆ ಹೆದರಿ ರೈತ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ.

ಅಥಣಿ: ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ರಾಯಬಾಗ/ಚಿಕ್ಕೋಡಿ: ಸಾಲಕ್ಕೆ ಹೆದರಿ ರೈತ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ.

ರೈತ ಸಂಗಪ್ಪ ಬಸಪ್ಪ ಯಲ್ಲಟ್ಟಿ(೫೦) ಮೃತ ದುರ್ದೈವಿ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೃಷ್ಣಾ ನದಿ ಪ್ರವಾಹ ಬಂದಾಗ 6 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಮನೆ ಪ್ರವಾಹದಲ್ಲಿ ಮುಳುಗಿ ಸಂಪೂರ್ಣ ನಾಶವಾಗಿ ಅಪಾರ ಹಾನಿಯಾಗಿತ್ತು. ಅಲ್ಲದೇ ರೈತ ಸಿಂಡಿಕೇಟ್ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಸ್ಥಳೀಯ ಸಹಕಾರಿ ಸಂಘದಲ್ಲಿ ಸಾಲ ಹಾಗೂ ಕೈಗಡ ಸೇರಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದಾರೆ.

ತಾವು ಮಾಡಿರುವ ಸಾಲ ತೀರಿಸುವುದು ಹೇಗೆಂದು ಮನನೊಂದು ಸಂಗಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತನಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿ ಇದ್ದಾರೆ.

ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.