ಸಮೀಕ್ಷೆಗೆ ತೆರಳುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್'ಗಳ ಅಗತ್ಯವಿದೆ: ಸಚಿವ ಸುರೇಶ್ ಕುಮಾರ್
ಕೊರೋನಾ ಪತ್ತೆ ಹಚ್ಚಲು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್ಸ್ ಗಳ ಅಗತ್ಯವಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಪತ್ತೆ ಹಚ್ಚಲು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್ಸ್ ಗಳ ಅಗತ್ಯವಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಈ ಕುರಿತು ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿರುವ ಅವರು, ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಟುಂಬಗಳ ಸಾರ್ವತ್ರಿಕ ಆರೋಗ್ಯ ಸಮೀಕ್ಷೆಗೆ ಬಳಸಿಕೊಳ್ಳುವ ಶಿಕ್ಷಕರಿಗೆ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆ ಒದಗಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಶಿಕ್ಷಣ ಇಲಾಖೆಗೆ ಪ್ರತ್ಯೇಕ ಟೀವಿ ವಾಹಿನಿ ಶುರು
ತರಗತಿಗಳ ಪುನರ್ ಮನನ, ತಜ್ಞ ಶಿಕ್ಷಕರಿಂದ ಉಪನ್ಯಾಸ ಸೇರಿ ಶೈಕ್ಷಣಿಕ ಚಟುವಟಿಕೆ ನಡೆಸಲು ಶಿಕ್ಷಣ ಇಲಾಖೆಗೆ ಪ್ರತ್ಯೇಕ ಟೀವಿ ವಾಹಿನಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ. ಪದವಿ ಪೂರ್ವ ಶಿಕ್ಷಣ ಇಲಾಕೆ ಅಧಿಕಾರಿಗಳು, ದೂರದರ್ಶನದ ಹೆಚ್ಚುವರಿ ನಿರ್ದೇಶಕ ರಾಜಕುಮಾರ್ ಉಪಾಧ್ಯಾಯ ಅವರೊಂದಿಗೆ ಸೋಮವಾರ ಚರ್ಚೆ ನಡೆಸಿದ ಸುರೇಶ್ ಕುಮಾರ್ ಅವರು, ಟೀವಿ ಚಾನೆಲ್ ತೆರೆಯಲು ಕ್ರಿಯಾ ಯೋಜನೆ ಕುರಿತು ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


