ವಂದೇ ಭಾರತ್ ಮಿಷನ್ : ದುಬೈನಿಂದ ಮಂಗಳೂರಿಗೆ ಆಗಮಿಸಿದ 177 ಕನ್ನಡಿಗರು
ಕೋವಿಡ್ 19 ಕಾರಣದಿಂದ ದುಬೈನಲ್ಲಿ ಸಿಲುಕಿಕೊಂಡಿದ್ದ 177 ಕನ್ನಡಿಗರನ್ನು ಒಳಗೊಂಡ ವಿಮಾನ ಮಂಗಳವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ.

ಮಂಗಳೂರು: ಕೋವಿಡ್ 19 ಕಾರಣದಿಂದ ದುಬೈನಲ್ಲಿ ಸಿಲುಕಿಕೊಂಡಿದ್ದ 177 ಕನ್ನಡಿಗರನ್ನು ಒಳಗೊಂಡ ವಿಮಾನ ಮಂಗಳವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ.
ಈ ಮೂಲಕ ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ತಾಯ್ನಾಡಿಗೆ ಏರ್‌ಲಿಫ್ಟ್ ಮಾಡುವ ಬಹುನಿರೀಕ್ಷಿತ ‘ವಂದೇ ಭಾರತ್’ ಯೋಜನೆಯಡಿ ಮಂಗಳೂರಿಗೆ ಮೊದಲ ವಿಮಾನ ಆಗಮಿಸಿದಂತಾಗಿದೆ.
ದ.ಕ. ಜಿಲ್ಲೆಯ 96, ಉಡುಪಿ ಜಿಲ್ಲೆಯ 49 ಹಾಗೂ ಇತರ ಜಿಲ್ಲೆಗಳ 31 ಪ್ರಯಾಣಿಕರಿದ್ದರು. ಅವರಲ್ಲಿ 38 ಗರ್ಭಿಣಿಯರು, ವೈದ್ಯಕೀಯ ಚಿಕಿತ್ಸೆ ಪಡೆಯುವ ನಿರೀಕ್ಷೆಯಲ್ಲಿರುವವರು, ದುಬೈಯಲ್ಲಿ ಕೆಲಸ ಕಳೆದುಕೊಂಡವರು, ವೀಸಾ ಅವಧಿ ಮುಗಿದವರು, ಕುಟುಂಬ ಮೆಡಿಕಲ್ ಅಗತ್ಯ ಇರುವವರು, ಪ್ರವಾಸಕ್ಕೆ ಹೋಗಿ ಬಾಕಿಯಾದವರು ಸೇರಿದ್ದಾರೆ.
ಮಂಗಳವಾರ ಮಧ್ಯಾಹ್ನ ಮಂಗಳೂರಿನಿಂದ ದುಬೈಗೆ ತೆರಳಿದ್ದ ಖಾಲಿ ವಿಮಾನವು ರಾತ್ರಿ 7 ಗಂಟೆಗೆ ಪ್ರಯಾಣಿಕರೊಂದಿಗೆ ಹೊರಟು ತಡರಾತ್ರಿ ಮರಳಿ ಬಂದಿತು. ಇಳಿದ ತತ್‌ಕ್ಷಣವೇ ಜಿಲ್ಲಾ ವೈದ್ಯಾಧಿಕಾರಿಗಳ ತಂಡವು ವಿಶೇಷ ಪಿಇಪಿ ಕಿಟ್ ಧರಿಸಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿತು.
ಪ್ರಯಾಣಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು, ಮಂಗಳೂರು ಜಿಲ್ಲಾಡಳಿತ ಪ್ರಯಾಣಿಕರಿಗೆ ಎಲ್ಲಾ ರೀತಿಯ ಆಗತ್ಯ ನೆರವು ಒದಗಿಸಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


