ಹೊಸಪೇಟೆ: ಕೊರೋನಾ ಸುದ್ದಿ ಕೇಳಿ ಕೇಳಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆತ್ಮಹತ್ಯೆ
ಮಾಹಾಮಾರಿ ಕೊರೋನಾ ಹಾವಳಿಯ ಸುದ್ದಿ ಕೇಳಿ ಕೇಳಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ಮಾಹಾಮಾರಿ ಕೊರೋನಾ ಹಾವಳಿಯ ಸುದ್ದಿ ಕೇಳಿ ಕೇಳಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿರುವ ಸುದ್ದಿ ಕೇಳಿದಾಗಲೆಲ್ಲ ಬೆಚ್ಚಿ ಬೀಳುತಿದ್ದ ಮಹಿಳೆ, ತನಗೆ ಕೊರೋನಾ ಮಾರಿ ಬಂದರೆ ಹೇಗೆ ಎಂದು ಆಗಾಗಾ ಭಯ ಪಡುತಿದ್ದಳು.
ಮಾನಸಿಕ ಖಿನ್ನತೆಗೆ ಒಳಗಾಗಿದ್ದ 34 ವರ್ಷ ಲಕ್ಷ್ಮಿ ಎಂಬ ಮಹಿಳೆ ಕೊನೆಗೆ ಇಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಮಹಿಳೆ ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಜಬ್ಬಲ್ ವೃತ್ತದ ಬಳಿಯ ಪ್ರದೇಶದಲ್ಲಿ ವಾಸವಾಗಿದ್ದರು,
ಈ ಸಂಬಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


