ಗುಂಟೂರಿನಲ್ಲಿ ನಡೆದ ತಬ್ಲಿಘಿಗಳ ಸಭೆಯಲ್ಲಿ ಕಲಬುರಗಿಯ 11 ಮಂದಿ ಭಾಗಿ
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಕೊರೋನಾ ಬಂದಿದ್ದನ್ನು ಕಂಡು ಹಿಡಿದ ಜಿಲ್ಲಾಡಳಿತ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ಅಂತದ್ದೇ ಸಭೆಯಲ್ಲಿ ಭಾಗಿಯಾಗಿದ್ದವರಿಗೆ ಕೊರೋನಾ ಸೋಂಕು ಕಂಡು ಬಂದಿದೆ ಎಂದು ಮೂಲಳು ತಿಳಿಸಿವೆ.

ಕಲಬುರಗಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಕೊರೋನಾ ಬಂದಿದ್ದನ್ನು ಕಂಡು ಹಿಡಿದ ಜಿಲ್ಲಾಡಳಿತ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ಅಂತದ್ದೇ ಸಭೆಯಲ್ಲಿ ಭಾಗಿಯಾಗಿದ್ದವರಿಗೆ ಕೊರೋನಾ ಸೋಂಕು ಕಂಡು ಬಂದಿದೆ ಎಂದು ಮೂಲಳು ತಿಳಿಸಿವೆ.
ಇತ್ತೀಚೆಗೆ ಗುಂಟೂರಿನಲ್ಲಿ ನಡೆದ ಸಭೆಯಲ್ಲಿ ಕಲಬುರಿಯ 11 ಮಂದಿ ಭಾಗವಹಿಸಿದ್ದವರಿಗೆಲ್ಲಾ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇವರೆಲ್ಲಾ ವಾಪಸ್ ಬರುವಾಗ ಸೇಡಂ ಬಳಿ ವಿಚಾರಣೆಗೊಳಪಡಿಸಿದಾಗ ಅವರ ಟ್ರಾವೆಲ್ ಹಿಸ್ಟರಿ ತಿಳಿದಿದೆ, ಕೂಡಲೇ ಅವರನ್ನು ಕಲಬುರಗಿಯ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಅನೇಕ ಜನ ಗುಂಟೂರು ಸಭೆಯಲ್ಲಿ ಭಾಗವಹಿಸಿದ್ದರು ಈಗ ಅವರೆಲ್ಲರನ್ನೂ ಪತ್ತೆಹಚ್ಚಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 8 ಹೊಸ ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಇದರಲ್ಲಿ ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


