ರಾಜ್ಯ

ರಾಜ್ಯಕ್ಕೆ ಕೊರೋನಾಘಾತ: ಕಳೆದ 24 ಗಂಟೆಯಲ್ಲಿ 28 ಪ್ರಕರಣ ಪತ್ತೆ, 2 ಸಾವು, ಒಟ್ಟು 987 ಸೋಂಕು!

ಕರ್ನಾಟಕದಲ್ಲಿ ಕೊರೋನಾವೈರಸ್ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದ್ದು ರಾಜ್ಯದಲ್ಲಿ ಮತ್ತೆ 28 ಮಂದಿಗೆ ಸೋಂಕು ತಗುಲಿದ್ದು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತಲಾ ಒಬ್ಬರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ರಾಜ್ಯಕ್ಕೆ ಕೊರೋನಾಘಾತ: ಕಳೆದ 24 ಗಂಟೆಯಲ್ಲಿ 28 ಪ್ರಕರಣ ಪತ್ತೆ, 2 ಸಾವು, ಒಟ್ಟು 987 ಸೋಂಕು!
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾವೈರಸ್ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದ್ದು ರಾಜ್ಯದಲ್ಲಿ ಮತ್ತೆ 28 ಮಂದಿಗೆ ಸೋಂಕು ತಗುಲಿದ್ದು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತಲಾ ಒಬ್ಬರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ರಾಜ್ಯದ ಒಟ್ತಾರೆ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಏ.26ರಂದು ಪಾರ್ಶ್ವವಾಯುವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಸೊಂಕು ಪತ್ತೆಯಾಗಿದ್ದರಿಂದ ಐಸಿಯುಗೆ ವರ್ಗಾಯಿಸಲಾಗಿತ್ತು. ಗುರುವಾರ ಬೆಳಗ್ಗೆ ಅವರು ಸೆಪ್ಟಿಕ್ ಶಾಕ್ ನಿಂದ ಮೃತಪಟ್ಟಿದ್ದಾರೆ.

ನ್ಯುಮೋನಿಯಾ ಮತ್ತು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಆಂಧ್ರಪ್ರದೇಶದ ಅನಂತಪುರದ 60 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಕಡಿಮೆ ರಕ್ತದ ಒತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಬೀದರ್ 7, ಬೆಂಗಳೂರು 5, ಮಂಡ್ಯ 5, ಗದಗ 4, ದಾವಣಗೆರೆ 3, ಕಲಬುರಗಿ 2, ಬಾಗಲಕೋಟೆ 1 ಮತ್ತು ಬೆಳಗಾವಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ಇನ್ನು ರಾಜ್ಯದಲ್ಲಿ 987 ಮಂದಿ ಸೋಂಕಿತರ ಪೈಕಿ 460 ಮಂದಿ ಗುಣಮುಖರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.