ರಾಜ್ಯ

ಎಲ್ಲಾ ವಾರ್ಡ್ ಗಳಲ್ಲಿ ಜನೌಷಧಿ ಕೇಂದ್ರ ಸ್ಥಾಪನೆಗೆ ಬಿಬಿಎಂಪಿಗೆ ಡಾ. ಸಿ.ಎನ್. ಅಶ್ವತ್ ನಾರಾಯಣ ನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜನೌಷಧಿ ಕೇಂದ್ರಗಳ ಸ್ಥಾಪನೆ ಹಾಗೂ ಅವುಗಳು 24 ಗಂಟೆಯೂ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ನಿರ್ದೇಶನ ನೀಡಿದ್ದಾರೆ.

ಎಲ್ಲಾ ವಾರ್ಡ್ ಗಳಲ್ಲಿ ಜನೌಷಧಿ ಕೇಂದ್ರ ಸ್ಥಾಪನೆಗೆ ಬಿಬಿಎಂಪಿಗೆ ಡಾ. ಸಿ.ಎನ್. ಅಶ್ವತ್ ನಾರಾಯಣ ನಿರ್ದೇಶನ
ಡಾ. ಸಿ. ಎನ್. ಅಶ್ವತ್ ನಾರಾಯಣ
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜನೌಷಧಿ ಕೇಂದ್ರಗಳ ಸ್ಥಾಪನೆ ಹಾಗೂ ಅವುಗಳು 24 ಗಂಟೆಯೂ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ನಿರ್ದೇಶನ ನೀಡಿದ್ದಾರೆ.

ಉಭಯ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಕ್ಟರ್ ಜೊತೆಗೆ ಟೆಲಿಕಾನ್ಫರೆನ್ಸ್ ಸೌಲಭ್ಯ ಹೊಂದುವಂತೆ, ರೌಂಡಿ ದಿ ಕ್ಲಾಕ್ ನಂತೆ  ರೋಗಿಗಳನ್ನು ವೈದ್ಯರು ನೋಡಿಕೊಳ್ಳುವಂತೆ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಔಷಧ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. 

ತುರ್ತು ಪ್ರಕರಣಗಳಿಗಾಗಿ ಖಾಸಗಿ ವೈದ್ಯರೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ಬಿಬಿಎಂಪಿ ಮತ್ತು ಆರೋಗ್ಯ ಅಧಿಕಾರಿಗಳು ಖಾತ್ರಿಮಾಡಿಕೊಳ್ಳಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜನೌಷಧಿ ಕೇಂದ್ರಗಳಿಗೆ ಭೇಟಿ ಮಾಡಿದ ಯಾವುದೇ ರೋಗಿ ವೈದ್ಯರಿಲ್ಲದೆ ಅವರು ಹಿಂತಿರುಗಬಾರದು ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.