ರಾಜ್ಯ

ವಿಶೇಷ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್

ದೇಶದಲ್ಲಿ ನಿಗದಿತ ರೈಲು ಸೇವೆ ಪುನರ್ ಆರಂಭಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಿಂದ ಸುಮಾರು 1 ಸಾವಿರ ಪ್ರಯಾಣಿಕರು ಗುರುವಾರ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ದೇಶದಲ್ಲಿ ನಿಗದಿತ ರೈಲು ಸೇವೆ ಪುನರ್ ಆರಂಭಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಿಂದ ಸುಮಾರು 1 ಸಾವಿರ ಪ್ರಯಾಣಿಕರು ಗುರುವಾರ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ನಗರ ರೈಲು ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಕೋವಿಡ್-19 ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಯಿತು.

ಮಂಗಳವಾರ ರಾತ್ರಿ 9-30ಕ್ಕೆ ದೆಹಲಿಯಿಂದ ನಿರ್ಗಮಿಸಿದ ರೈಲು 40 ನಿಮಿಷ ತಡವಾಗಿ ಗುರುವಾರ ಬೆಳಗ್ಗೆ 6-40ಕ್ಕೆ ಬೆಂಗಳೂರು ರೈಲು ನಿಲ್ದಾಣ ತಲುಪಿತು. ಪ್ರಯಾಣಿಕರ ತಪಾಸಣೆಗಾಗಿ ಆರೋಗ್ಯ ಇಲಾಖೆ 10 ತಪಾಸಣಾ ಕೇಂದ್ರಗಳನ್ನು ತೆರೆದಿತ್ತು ಎಂದು ರೈಲು ನಿಲ್ದಾಣದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಮೇಲೆ ರೈಲ್ವೆ ಸುರಕ್ಷತಾ ತಂಡ ತೀವ್ರ ನಿಗಾವಹಿಸಿತ್ತು, ರೈಲಿನಿಂದ ಇಳಿಯುವಾಗ ನೂಕು ನುಗ್ಗಲು ಉಂಟಾಗದಂತೆ ಎಚ್ಚರ ವಹಿಸಲಾಗಿತ್ತು. ಈ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ನಲ್ಲಿಡಲಾಗುವುದು, ಬಳಿಕ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದರೆ ಅವರ ಮನೆಗಳಿಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 

15 ಬಿಎಂಟಿಸಿ ಬಸ್ ಗಳಲ್ಲಿ ಕ್ವಾರಂಟೈನ್ ಕೇಂದ್ರಗಳಿಗೆ ಪ್ರಯಾಣಿಕರನ್ನು ಕರೆದೊಯ್ಯಲಾಯಿತು. ಮೆಜೆಸ್ಟಿಕ್ ರೈಲು ನಿಲ್ದಾಣದ ಸುತ್ತಮುತ್ತ 42 ಹೋಟೆಲ್ ಗಳಲ್ಲಿ 4, 200 ಕೊಠಡಿಗಳನ್ನು ಬುಕ್ ಮಾಡಲಾಗಿದೆ. 

ರೈಲ್ವೆ ನಿಲ್ದಾಣದ ಸುತ್ತಮುತ್ತ 90 ಹೋಟೆಲ್ ಗಳನ್ನು ಮೀಸಲಿರಸಲಾಗಿದೆ. ಈ ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡಲು ಸಿದ್ಧರಿರುವ ಪ್ರಯಾಣಿಕರು ವೆಚ್ಚವನ್ನು ಭರಿಸಬೇಕಾಗುತ್ತದೆ. ವೆಚ್ಚವನ್ನು ಭರಿಸಲು ಸಾಧ್ಯವಾಗದವರಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎಲ್. ಶಿವಮೂರ್ತಿ ವಿಡಿಯೋ ಸಂದೇಶ ಕಳುಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.