ಕೊರೋನಾ ಹಾಟ್'ಸ್ಪಾಟ್ ಎನಿಸಿಕೊಂಡಿದ್ದರೂ ಪರೀಕ್ಷಾ ಸಾಮರ್ಥ್ಯದಲ್ಲಿ ಇನ್ನೂ ಹಿಂದೆಯೇ ಉಳಿದಿದೆ ಬೆಳಗಾವಿ!
ರಾಜ್ಯದಲ್ಲಿ ಬೆಂಗಳೂರು ಬಳಿಕ ಕೊರೋನಾಗೆಎರಡನೇ ಹಾಟ್'ಸ್ಪಾಟ್ ಜಿಲ್ಲೆ ಎನಿಸಿಕೊಂಡಿರುವ ಬೆಳಗಾವಿಯಲ್ಲಿ ಪರೀಕ್ಷಾ ಸಾಮರ್ಥ್ಯದ ಕೊರತೆ ಎದ್ದು ಕಾಣುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಬಳಿಕ ಕೊರೋನಾಗೆಎರಡನೇ ಹಾಟ್'ಸ್ಪಾಟ್ ಜಿಲ್ಲೆ ಎನಿಸಿಕೊಂಡಿರುವ ಬೆಳಗಾವಿಯಲ್ಲಿ ಪರೀಕ್ಷಾ ಸಾಮರ್ಥ್ಯದ ಕೊರತೆ ಎದ್ದು ಕಾಣುತ್ತಿದೆ.
ಬೆಂಗಳೂರಿನಲ್ಲಿ ಈ ವರೆಗೂ 154 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, 15,750 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಬೆಳಗಾವಿಯಲ್ಲಿ 114 ಪ್ರಕರಣಗಳು ಬೆಳಕಿಗೆ ಬಂದಿದ್ದರೂ, ಬೆಂಗಳೂರಿಗೆ ಹೋಲಿಕೆ ಮಾಡಿದರೆ ಕೇವಲ ಅದರ ಅರ್ಧದಷ್ಟು ಅಂದರೆ, 6,450 ಪರೀಕ್ಷೆಗಳನ್ನಷ್ಟೇ ನಡೆಸಿದೆ ಎಂದು ತಿಳಿದುಬಂದಿದೆ.
ಎರಡನೇ ಹಾಟ್'ಸ್ಪಾಟ್ ಎನಿಸಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ ಕೇವಲ ಒಂದೇ ಒಂದು ಪರೀಕ್ಷಾ ಕೇಂದ್ರವಿದೆ. ಬೆಳಗಾವಿಯಲ್ಲಿ ಪ್ರಸ್ತುತ ಬೆಳಕಿಗೆ ಬಂದಿರುವ ಪ್ರಕರಣಗಳು ರಾಷ್ಟ್ರ ರಾಜಧಾನಿ ದೆಹಲಿಯ ತಬ್ಲೀಘಿಗಳೊಂದಿಗೆ ನಂಟು ಹೊಂದಿವೆ. ಕಾರ್ಯಕ್ರಮಕ್ಕೆ ಭೇಟಿ ನೀಡಿ ಬಂದಿದ್ದ 4 ಮಂದಿಯಿಂದಾಗಿ 85 ಮಂದಿಗೆ ಸೋಂಕು ಹರಡಿದೆ. ಇನ್ನು 22 ಮಂದಿ ರಾಜಸ್ತಾನದ ಅಜ್ಮೆರ್ ಜೊತೆಗೆ ನಂಟು ಹೊಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಬೆಳಗಾವಿ ಜಿಲ್ಲೆ ಆರೋಗ್ಯಾಧಿಕಾರಿ ಡಾ.ಎಸ್.ವಿ.ಮುನ್ಯಾಳ್ ಅವರು ಮಾತನಾಡಿ, ಪರೀಕ್ಷೆಯನ್ನು ವೈಜ್ಞಾನಿಕ ರೀತಿಯ ಪರೀಕ್ಷೆಗಳಿಂದಾಗಿ ನಾವು ಹೆಚ್ಚಿನ ಪ್ರಕರಣಗಳುನ್ನು ಪತ್ತೆ ಹಚ್ಚಿದ್ದೇವೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಪರೀಕ್ಷೆಗಳನ್ನು ನಡೆಸಿದ್ದೇವೆ ಅತ್ಯಂತ ಸೂಕ್ಷ್ಮ ಹಾಗೂ ಕಂಟೈನ್ಮೆಂಟ್ ಝೋನ್ ಗಳಲ್ಲಿ ಪರೀಕ್ಷೆ ನಡೆಸಲು ಗಮನ ಹರಿಸಲಾಗುತ್ತದೆ ಎಂದು ಹೇಳಿದ್ದಾರೆ.
ರಾಜಸ್ತಾನದಿಂದ ಬಂದ ಹಲವು ವಲಸಿಗ ಜನರದಲ್ಲಿ ವೈರಸ್ ಪತ್ತೆಯಾಗಿದೆ. ಅಗತ್ಯ ಬಿದ್ದರೆ. ಪರೀಕ್ಷಾ ಪ್ರಯೋಗಾಲಯಗಳನ್ನು ಸೇರ್ಪಡೆಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ನಡುವೆ ಹೇಳಿಕೆ ನೀಡಿರುವ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ 38 ಪ್ರಯೋಗಾಲಯಗಳ ಸ್ಥಾಪನೆಗೆ ಐಸಿಎಂಆರ್ ಒಪ್ಪಿಗೆ ನೀಡಿದೆ, ಬೆಳಗಾವಿಯಲ್ಲಿ ಅತೀ ಹೆಚ್ಚಿನ ಪ್ರಯೋಗಾಲಯ ಸ್ಥಾಪಿಸಲು ನಾವು ಯೋಜನೆ ರೂಪಿಸಿದ್ದೇವೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


