ಸೋಂಕಿನ ಲಕ್ಷಣವಿಲ್ಲದ ಅನ್ಯ ಜಿಲ್ಲೆಗಳಿಂದ ಆಗಮಿಸಿದ ವ್ಯಕ್ತಿಗಳಿಗೆ ಕ್ವಾರಂಟೈನ್ ಇಲ್ಲ: ಆರೋಗ್ಯ ಇಲಾಖೆ ಪುನರುಚ್ಚಾರ
ಅನ್ಯ ಜಿಲ್ಲೆಯಿಂದ ಇನ್ನೊಂದು ಜಿಲ್ಲೆ ಆಗಮಿಸುವ ವ್ಯಕ್ತಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲದಿದ್ದಲ್ಲಿ ಅವರಿಗೆ ಕ್ವಾರಂಟೈನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ.

ಬೆಂಗಳೂರು: ಅನ್ಯ ಜಿಲ್ಲೆಯಿಂದ ಇನ್ನೊಂದು ಜಿಲ್ಲೆ ಆಗಮಿಸುವ ವ್ಯಕ್ತಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲದಿದ್ದಲ್ಲಿ ಅವರಿಗೆ ಕ್ವಾರಂಟೈನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ.
ರಾಜ್ಯದಲ್ಲಿ ಲಾಕ್ ಡೌನ್ ವಿನಾಯ್ತಿ ಹಿನ್ನೆಲೆಯಲ್ಲಿ ಅಂತರಜಿಲ್ಲೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ, ಜಿಲ್ಲೆಯಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದರೆ ಕ್ವಾರಂಟೈನ್ ಮಾಡಲಾಗುತ್ತದೆ ಎಂಬ ವದಂತಿ ಇದೆ. ಈ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇವಲ ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ವಿಶೇಷ ವಿಮಾನ ಮತ್ತು ರೈಲುಗಳಲ್ಲಿ ಆಗಮಿಸಿದವರಿಗೆ ಮಾತ್ರ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ, ಅನ್ಯ ಜಿಲ್ಲೆಗಳಿಗೆ ಪ್ರಯಾಣಿಸಿ ಎರಡು ದಿನಗಳಿಗೂ ಹೆಚ್ಚು ಕಾಲ ವಾಸ್ತವ್ಯ ಹೂಡಿದರೆ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂಬ ವದಂತಿಯಿತ್ತು. ಇದು ಜನರ ಆತಂಕಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


