ಲಾಕ್ ಡೌನ್: ಸಂಕಷ್ಟದಲ್ಲಿರುವವರಿಗೆ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ
ಕಳೆದ ಒಂದು ವಾರದ ಹಿಂದಷ್ಟೇ ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ 1, 610 ಕೋಟಿ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಬೆಂಗಳೂರು: ಕಳೆದ ಒಂದು ವಾರದ ಹಿಂದಷ್ಟೇ ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ 1, 610 ಕೋಟಿ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ತೋಟಗಾರಿಕೆ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 15 ಸಾವಿರ ರೂಪಾಯಿ, ವಿದ್ಯುತ್ ಮಗ್ಗದ ಕೆಲಸಗಾರರಿಗೆ 2 ಸಾವಿರ ರೂ. ಆರ್ಥಿಕ ನೆರವನ್ನು ಘೋಷಿಸಲಾಗಿದೆ. ಹೆಚ್ಚುವರಿಯಾಗಿ ಅಂದಾಜು 162 ಕೋಟಿ ಪರಿಹಾರವನ್ನು ಘೋಷಿಸಿದ್ದು, ಒಟ್ಟು 1, 772 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದಂತಾಗಿದೆ.
ಈ ಹಿಂದೆ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ನೀಡಲು ನಿರ್ಧರಿಸಲಾಗಿತ್ತು. ಇದೀಗ ತರಕಾರಿ ಮತ್ತು ಹಣ್ಣು ಬೆಳೆಗಾರರಿಗೆ 137 ಕೋಟಿ ರೂ. ಗಳ ಪರಿಹಾರವನ್ನು ನೀಡಲು ಉದ್ದೇಶಿಸಲಾಗಿದೆ. ಕಾಫಿ, ಕೊಪ್ರಾ ಮತ್ತಿತರ ವಾಣಿಜ್ಯ ಬೆಳೆಗಳಿಗೆ ಅದು ಅನ್ವಯವಾಗಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ನೇಕಾರ ಸಮ್ಮಾನ್ ಯೋಜನೆಯಡಿ 1. 25 ಲಕ್ಷ ವಿದ್ಯುತ್ ಮಗ್ಗದ ಕೆಲಸಗಾರರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂ. ನೇರವಾಗಿ ವರ್ಗಾವಣೆ ಆಗಲಿದೆ. ಈ ಯೋಜನೆಗಾಗಿ 25 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರಕಟಿಸಿರುವ ಎರಡನೇ ಕಂತಿನ ಪ್ಯಾಕೇಜ್ ನಿಂದ ವಲಸೆ ಕಾರ್ಮಿಕರು, ಬೀದಿ ಕಾರ್ಮಿಕರು, ಸಣ್ಣ ರೈತರು ಮತ್ತಿತರ ಬಡ ಜನರಿಗೆ ಅನುಕೂಲವಾಗಲಿದೆ. ಏಕರೂಪದ ಕನಿಷ್ಠ ವೇತನ ನಿಗದಿಯಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಲಾಭವಾಗಲಿದೆ. ಉಚಿತ ಪಡಿತರ, ಸ್ಥಿರ ಮನೆ ಬಾಡಿಗೆ ಇತ್ಯಾದಿಗಳು ಅವರಿಗೆ ಸುರಕ್ಷಿತ ಭಾವನೆ ಮೂಡಿಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


